ಇದೆ ಮೊದಲ ಬಾರಿಗೆ ಪರಮಾಪ್ತ ಸಿ.ಎಂ.ಇಬ್ರಾಹಿಂ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah-Ibrahimಮೈಸೂರು,ಅ.22- ಅತೃಪ್ತರನ್ನು ತೃಪ್ತಿಪಡಿಸಲು ಎಂದೆಂದಿಗೂ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಪ್ರಥಮ ಬಾರಿಗೆ ತನ್ನ ಪರಮಾಪ್ತ ಸಿ.ಎಂ.ಇಬ್ರಾಹಿಂ ಮೇಲೆ ಹರಿಹಾಯ್ದಿದ್ದಾರೆ.  ಕಾಂಗ್ರೆಸ್‍ನಲ್ಲಿ ಒಳಗೊಳಗೆ ನಡೆಯುತ್ತಿದ್ದ ಮುಸುಕಿನ ಗುದ್ದಾಟ ಬಹಿರಂಗವಾಗಿದೆ. ನಿನ್ನೆ ಮಾಜಿ ಕೇಂದ್ರ ಸಚಿವ ಹಾಗೂ ಮುಖಂಡ ಸಿ.ಎಂ.ಇಬ್ರಾಹಿಂ ಅವರು ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ಟೀಕಿಸಿದ್ದರು.  ಇದಕ್ಕೆ ತಿರುಗೇಟು ನೀಡುವಂತೆ ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಕೆಲವರಿಗೆ ಯಾವಾಗಲೂ ಅತೃಪ್ತಿ ಇರುತ್ತದೆ. ಹಾಗಾಗಿ ಅವರು ಬಾಯಿಗೆ ಬಂದಂತೆ ಹೇಳಿಕೆಗಳನ್ನು ನೀಡುತ್ತಾರೆ. ಇದೆಲ್ಲವನ್ನು ಮೊದಲಿನಿಂದಲೂ ನೋಡಿದ್ದೇನೆ. ಹೆಚ್ಚಾಗಿ ಅಂಥವರ ಬಗ್ಗೆ ಮಾತನಾಡುವುದು ಇಷ್ಟವಿಲ್ಲ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಬರದಿಂದ ಉಂಟಾಗಿರುವ ಬೆಳೆ ನಷ್ಟದ ಬಗ್ಗೆ ಕೇಂದ್ರಕ್ಕೆ ವರದಿ ಸಲ್ಲಿಸಲು ಸ್ವತಃ ಕಂದಾಯ ಸಚಿವರೇ ದೆಹಲಿಗೆ ತೆರಳಿದ್ದಾರೆ. ಆದರೆ ಸದ್ಯಬೆಳೆ ನಷ್ಟದ ಕುರಿತಂತೆ ವರದಿ ನನ್ನ ಕೈ ಸೇರಿಲ್ಲ. ಅದು ಬಂದ ನಂತರ ಕೇಂದ್ರದ ನೆರವು ಕೋರಿ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.  ಈ ಬಾರಿ ಹೆಚ್ಚಿನ ಪರಿಹಾರ ನಿರೀಕ್ಷೆ ಹೊಂದಿದ್ದು , ಗ್ರಾಮೀಣ ಭಾಗದ ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಸದಾ ಸಿದ್ದವಿದೆ ಎಂದು ತಿಳಿಸಿದರು.  ಇದೇ ವೇಳೆ ಫಾಲ್ಕಾನ್ ಕಾರ್ಖಾನೆ ಕಾರ್ಮಿಕರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಎರಡು ವರ್ಷಗಳಿಂದ ಬಂದ್ ಆಗಿರುವ ಕಾರ್ಖಾನೆಯನ್ನು ಪುನರಾರಂಭಿಸುವಂತೆ ಮನವಿ ಮಾಡಿದರಲ್ಲದೆ ಕಾರ್ಖಾನೆ ಬಂದ್ ಆಗಿರುವುದರಿಂದ ಎದುರಾಗಿರುವ ಸಂಕಷ್ಟವನ್ನು ತಿಳಿಸಿ ಕಣ್ಣೀರಿಟ್ಟರು.

ಕೂಡಲೇ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ದೂರವಾಣಿ ಕರೆ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳು ಕಾರ್ಖಾನೆ ಪುನರಾರಂಭ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.  ಹಲವಾರು ಮಂದಿಯಿಂದ ಅಹವಾಲುಗಳನ್ನು ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇವುಗಳ ಪರಿಹಾರಕ್ಕೆ ಕ್ರಮ ವಹಿಸುವಂತೆ ತಮ್ಮ ಆಪ್ತ ಸಹಾಯಕರಿಗೆ ನಿರ್ದೇಶನ ನೀಡಿದರು.

► Follow us on –  Facebook / Twitter  / Google+

Facebook Comments

Sri Raghav

Admin