‘ಯಡಿಯೂರಪ್ಪನವರೇ ಮುಂದಿನ ಮುಖ್ಯಮಂತ್ರಿ’ : ಇದನ್ನು ರಕ್ತದಲ್ಲಿ ಬೇಕಾದರೂ ಬರೆದುಕೊಡುತ್ತೇನೆ

ಈ ಸುದ್ದಿಯನ್ನು ಶೇರ್ ಮಾಡಿ

ydiyurappa

ರಾಯಚೂರು ಅ.23 : ಯಡಿಯೂರಪ್ಪನವರೇ ನಮ್ಮ ಮುಂದಿನ ಮುಖ್ಯಮಂತ್ರಿ, ಇದನ್ನು ರಕ್ತದಲ್ಲಿ ಬೇಕಾದರೂ ಬರೆದುಕೊಡುತ್ತೇನೆ. ಎಂದು ಸಂಸದ ಶ್ರೀರಾಮುಲು ಹೇಳಿದರು. ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ಇಂದು ಬಿ.ಜೆ.ಪಿ. ವತಿಯಿಂದ ಏರ್ಪಡಿಸಿದ್ದ ಎಸ್.ಟಿ. ಸಮಾವೇಶದಲ್ಲಿ ಮಾತನಾಡಿದ ಅವರು ಎಸ್.ಟಿ. ಸಮಾಜದಲ್ಲಿ ಒಗ್ಗಟ್ಟಿನ ಕೊರತೆಯಿಂದ ಶೋಷಣೆಗೆ ಒಳಗಾಗುತ್ತಿದ್ದು, ಎಲ್ಲರೂ ಒಂದಾಗಬೇಕಿದೆ,  ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮಾತನಾಡಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 15 ಎಸ್.ಟಿ. ಮೀಸಲು ಕ್ಷೇತ್ರಗಳಲ್ಲಿ ಬಿ.ಜೆ.ಪಿ.ಯನ್ನು ಗೆಲ್ಲಿಸಿ ಅಧಿಕಾರಕ್ಕೆ ತನ್ನಿ. ನಿಮ್ಮ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇನೆ ಎಂದು ಭರವಸೆ ನೀಡಿದರು. ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಬೆಂಬಲಿಸಿ, ಹೆಚ್ಚಿನ ಸ್ಥಾನಗಳೊಂದಿಗೆ ಅಧಿಕಾರಕ್ಕೆ ತರಬೇಕೆಂದು ಮನವಿ ಮಾಡಿದರು.

ಮಾಜಿ ಸಚಿವ ಶಿವನಗೌಡ ನಾಯಕ್, ಮುಂದಿನ ಚುನಾವಣೆಯಲ್ಲಿ ಬಿ.ಜೆ.ಪಿ.ಯನ್ನು ಅಧಿಕಾರಕ್ಕೆ ತರುತ್ತೇವೆ. ಎಸ್.ಟಿ. ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಹುದ್ದೆಯನ್ನು ಮೀಸಲಾಗಿಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಮಾತನಾಡಿ, ಬಜೆಟ್ ನಲ್ಲಿ ಘೋಷಿಸಿದಂತೆ ಎಸ್.ಟಿ. ಸಮುದಾಯಕ್ಕೆ ಅನುದಾನ ನೀಡದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅನ್ಯಾಯ ಎಸಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿ.ಜೆ.ಪಿ. ಅಧಿಕಾರಕ್ಕೆ ಬರುವುದು ನಿಶ್ಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

► Follow us on –  Facebook / Twitter  / Google+

Valmiki 2

Valmiki 3

Valmiki 4

Valmiki 5

 

Facebook Comments

Sri Raghav

Admin