ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರಲ್ಲಿ ಬೀದಿಗಿಳಿದ ರೈತರು

ಈ ಸುದ್ದಿಯನ್ನು ಶೇರ್ ಮಾಡಿ
ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಸಾವಿರಾರು ರೈತರು ಸಿಟಿ ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೂ ಹಮ್ಮಿಕೊಂಡಿದ್ದ ಬೃಹತ್ ರ್ಯಾಲಿ.
ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಸಾವಿರಾರು ರೈತರು ಸಿಟಿ ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೂ ಹಮ್ಮಿಕೊಂಡಿದ್ದ ಬೃಹತ್ ರ್ಯಾಲಿ.

ಬೆಂಗಳೂರು,ಅ.24- ಬೆಳೆ ನಷ್ಟ ಪರಿಹಾರ, ರೈತರ ಸಾಲ ಮನ್ನಾ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ(ಹುಚ್ಚವನಹಳ್ಳಿ ಮಂಜುನಾಥ್ ಬಣ) ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ರೈಲ್ವೆ ನಿಲ್ದಾಣದಿಂದ ಆಗಮಿ ಸಿದ ತಂಡೋಪ ತಂಡದ ರೈತರು ವಿಧಾನಸೌಧದವರೆಗೆ ಮೆರವಣಿಗೆ ನಡೆಸಿ ಅರಣ್ಯಭೂಮಿ ಸಾಗುವಳಿದಾರರಿಗೆ ಹಾಗೂ ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು, ಮಳೆ ಕೊರತೆ, ಅಂತರ್ಜಲ ಕುಸಿತ ಹಾಗೂ ನಾಲೆಗಳಲ್ಲಿ ನೀರು ಹರಿಯದೆ ಆಗಿರುವ ಬೆಳೆ ನಷ್ಟದಿಂದ ರೈತ ತತ್ತರಿಸಿದ್ದಾನೆ.

ರಾಜ್ಯವನ್ನು ಬರಪೀಡಿತವೆಂದು ಘೋಷಣೆ ಮಾಡಬೇಕು, ಹತ್ತಿ, ಈರುಳ್ಳಿ, ಶೇಂಗಾ, ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಪ್ರಕಟಿಸಬೇಕು, ಕೇವಲ ಕಾವೇರಿ ವಿಚಾರಕ್ಕೆ ಮಾತ್ರ ವಿಶೇಷ ಅಧಿವೇಶನ ನಡೆಸದೆ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಸರ್ಕಾರ ಕೂಡಲೇ ಅಧಿವೇಶನ ಕರೆಯಬೇಕು ಎಂದು ರಾಜ್ಯಾಧ್ಯಕ್ಷ ಹುಚ್ಚವನಹಳ್ಳಿ ಮಂಜುನಾಥ್ ಒತ್ತಾಯಿಸಿದರು.  ಇತ್ತ ಸಾಲವೂ ತೀರಿಸಲಾಗದೆ, ಅತ್ತ ಬೆಳೆಯೂ ಕೈಗೆ ಬರದೆ ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ. ಈ ಹಿನ್ನೆಲೆಯಲ್ಲಿ ರೈತ ಸಾಲವನ್ನು ಮನ್ನಾ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸರ್ಕಾರ ರೈತರ ಸಂಕಷ್ಟಗಳಿಗೆ ಕಿವಿಗೊಟ್ಟು ಸಮಸ್ಯೆ ಪರಿಹಾರಕ್ಕೆ ಸಮಾರೋಪಾದಿಯಲ್ಲಿ ಮುಂದಾ ಗಬೇಕಿದೆ. ಇಲ್ಲದಿದ್ದರೆ ಈ ಸಮಸ್ಯೆ ಬಗೆ ಹರಿಯದು ಎಂದು ಹೇಳಿದರು.  ಈ ನಿಟ್ಟಿನಲ್ಲಿ ಅರಣ್ಯ ಭೂಮಿ ಸಾಗುವಳಿದಾರರು ಹಾಗೂ ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವ ಮೂಲಕ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin