ಬೆಂಗಳೂರಲ್ಲಿ ಹಾಡುಹಗಲೇ ಬೈಕ್‍ ನಲ್ಲಿ ಬಂದು 16 ಲಕ್ಷ ರೂ. ಹಣವಿದ್ದ ಬ್ಯಾಗ ಕಸಿದು ಪರಾರಿ

ಈ ಸುದ್ದಿಯನ್ನು ಶೇರ್ ಮಾಡಿ

Bag
ಬೆಂಗಳೂರು, ಅ.25-ಮೂರು ಬೈಕ್‍ಗಳಲ್ಲಿ ಬಂದ ದರೋಡೆಕೋರರ ತಂಡವೊಂದು ಬೈಕ್ ಸವಾರರಿಬ್ಬರಿಂದ 16 ಲಕ್ಷ ರೂ. ಹಣವಿದ್ದ ಬ್ಯಾಗನ್ನು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ನಿನ್ನೆ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  ಮೆಟ್ರೋ ರೈಲು ನಿಲ್ದಾಣ ನಿನ್ನೆ ಮಧ್ಯಾಹ್ನ 1.30ರ ಸಮಯದಲ್ಲಿ ಖಾಸಗಿ ಕಂಪೆನಿಯ ಉದ್ಯೋಗಿಗಳಿಬ್ಬರು ಹಣ ಸಂಗ್ರಹಿಸಿಕೊಂಡು ಬೈಕ್‍ನಲ್ಲಿ ಹೋಗುತ್ತಿದ್ದರು. ಆಗ ಹಿಂದಿನಿಂದ ಮೂರು ಬೈಕ್‍ಗಳಲ್ಲಿ ಬಂದ ಆರು ಮಂದಿ ದರೋಡೆಕೋರರು ಅವರನ್ನು ಅಡ್ಡಗಟ್ಟಿ ಬೆದರಿಸಿ 16 ಲಕ್ಷ ರೂ.ಗಳಿದ್ದ ಬ್ಯಾಗನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.ಈ ಬಗ್ಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಣ ದೋಚಿ ಪರಾರಿಯಾಗಿರುವ ದರೋಡೆಕೋರರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳನ್ನು ಸದ್ಯದಲ್ಲೇ ಬಂಧಿಸಲಾಗುವುದು ಎಂದು ಹಿರಿಯ ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin