ಹಾಲಿನ ದರ ಹೆಚ್ಚಿಸಲು ತುಮಕೂರು ಹಾಲು ಒಕ್ಕೂಟದಲ್ಲಿನ ಆಡಳಿತ ಮಂಡಳಿಯಲ್ಲಿ ಚರ್ಚೆ

ಈ ಸುದ್ದಿಯನ್ನು ಶೇರ್ ಮಾಡಿ

turvekere

ತುರುವೇಕೆರೆ, ಅ.25– ರೈತರಿಗೆ ನೀಡುವ ಹಾಲಿನ ದರ ಹೆಚ್ಚಿಸಲು ತುಮಕೂರು ಹಾಲು ಒಕ್ಕೂಟದಲ್ಲಿನ ಆಡಳಿತ ಮಂಡಳಿಯಲ್ಲಿ ಚರ್ಚೆ ನೆಡಸಲಾಗಿದೆ ಎಂದು ತುಮುಲ್ ನಿರ್ದೇಶಕ ಸಿ.ವಿ.ಮಹಾಲಿಂಗಯ್ಯ ತಿಳಿಸಿದರು.ತಾಲೂಕಿನ ದಂಡಿನಶಿವರ ಹೋಬಳಿಯ ಹುಲ್ಲೇಕೆರೆ ಗ್ರಾಮದಲ್ಲಿ ತುಮಕೂರು ಹಾಲು ಒಕ್ಕೂಟ ಹಾಗೂ ಪಶು ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾಲು ಭಾಯಿ ರೋಗ ಲಸಿಕೆ ಕಾರ್ಯಕ್ರಮದಲ್ಲಿ ಜಾನುವಾರುಗಳಿಗೆ ಲಸಿಕೆ ಹಾಕಿ ನಂತರ ಅವರು ಮಾತನಾಡಿದರು.ತಾಲೂಕಿನಲ್ಲಿ ಮಳೆ ಇಲ್ಲದೆ ಬರಗಾಲ ಆವರಿಸಿದ್ದು, ಹೈನುಗಾರಿಕೆಯಿಂದಾಗಿ ರೈತರು ತಮ್ಮ ಜೀವನವನ್ನು ನೆಡಸುವಂತಾಗಿದೆ. ರೈತರು ಹಾಲಿನ ದರ ಹೆಚ್ಚಿಸಲು ಮನವಿ ಮಾಡಿದ್ದು, ಅದ್ದರಿಂದ ಒಕ್ಕೂಟದ ಆಡಳಿತ ಮಂಡಳಿಯಲ್ಲಿ ಈಗಾಗಲೇ ಚರ್ಚೆ ನಡೆಸಲಿದ್ದು, ಮುಂದಿನ ದಿನಗಳಲ್ಲಿ ತೀರ್ಮಾನಿಸಲಾಗುವುದು ಎಂದರು.
ರೈತರು ತಮ್ಮ ಪ್ರತಿಯೊಂದು ರಾಸುಗಳಿಗೂ ತಪ್ಪದೆ ಕಾಲುಬಾಯಿ ರೋಗಕ್ಕೆ ಲಸಿಕೆ ಹಾಕಿಸಿ ತಮ್ಮ ಜಾನುವಾರುಗಳನ್ನುರಕ್ಷಿಸಿಕೊಳ್ಳಬೇಕಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ ತಲೆದೋರಿದ ಕಾಲು ಬಾಯಿ ಹೆಚ್ಚಾಗಿ ರಾಜ್ಯದಲ್ಲಿ ಸುಮಾರು 15 ಸಾವಿರ ರಾಸುಗಳು, ತಾಲೂಕಿನಲ್ಲಿ 64 ರಾಸುಗಳು ಸಾವನ್ನಪ್ಪಿವೆ. ಈ ರೋಗವನ್ನು ತಡೆಗಟ್ಟಲು ಸರ್ಕಾರ ಹಾಗೂ ಹಾಲು ಒಕ್ಕೂಟ ಸಂಯುಕ್ತದಲ್ಲಿ ನಿರಂತರವಾಗಿ ಲಸಿಕೆ ಕಾರ್ಯಕ್ರಮ ನಡೆಸಲಾಗುತ್ತಿದೆ. ರೈತರು ತಮ್ಮ ಎಲ್ಲಾ ರಾಸುಗಳಿಗೂ ಲಸಿಕೆ ಹಾಕಿಸಿ ಎಂದು ಸಲಹೆ ನೀಡಿದರು.ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ.ನಾಗರಾಜು, ಗ್ರಾಮ ಪಂಚಾಯ್ತಿ ಸದಸ್ಯ ಸಿದ್ದರಾಮಯ್ಯ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಶಿವಶಂಕರ್, ನಿರ್ದೇಶಕರಾದ ಪ್ರಭುಸ್ವಾಮಿ, ಕಾಂತಮಣಿ, ಶಿವಸ್ವಾಮಿ, ಸಂತೋಷ್, ಡಾ.ಶಶಿಧರ್, ಕಾರ್ಯದರ್ಶಿ ಕಾಂತರಾಜು ಹಾಗೂ ಗ್ರಾಮಸ್ಥರು ಹಾಜರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin