ಬಿಂದುಶ್ರೀ ರಾಷ್ಟ್ರಮಟ್ಟಕ್ಕೆ ಆಯ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

binduhsri

ಚಿಕ್ಕಮಗಳೂರು, ಅ.25- ನಗರದ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಇನ್ಫಾರ್ಮೇಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದಲ್ಲಿ 5ನೇ ಸೆಮಿಸ್ಟರ್ ಬಿಇ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಎನ್.ಬಿಂದುಶ್ರೀ ಅಂತರ ಕಾಲೇಜು ಕ್ರೀಡಾಕೂಟದಲ್ಲಿ ಜುಡೋ 48 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಹಳಿಯಾಲದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥ ರಾವ್ ದೇಶಪಾಂಡೆ ರೂರಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಸಿದ ಅಂತರ ಕಾಲೇಜು ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ಚಿನ್ನದ ಪದಕ ವಿಜೇತ ವಿದ್ಯಾರ್ಥಿನಿಯನ್ನು ಎ.ಐ.ಟಿ. ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin