ಆತ್ಮಹತ್ಯೆಗೆ ಶರಣಾದ  ಡಿ.ವೈ.ಎಸ್.ಪಿ ಕಲ್ಲಪ್ಪ ಹಂಡಿಭಾಗ್ ಸಹೋದರ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

kallapaa

ಬೆಳಗಾವಿ ಅ.27  : ಡಿ.ವೈ.ಎಸ್.ಪಿ. ಕಲ್ಲಪ್ಪ ಹಂಡಿಭಾಗ್ ಅವರ ಸಹೋದರ ಯಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೋಕಾಕ್ ತಾಲ್ಲೂಕಿನ ಕುಲಗೋಡು ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ, 28 ವರ್ಷದ ಯಲ್ಲಪ್ಪ ಹಂಡಿಭಾಗ್ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕುಲಗೋಡಿನ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಕುಲಗೋಡು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಯಭಾಗ ತಾಲ್ಲೂಕಿನ ಹಂದಿಗುಂದ ಗ್ರಾಮದ ಯಲ್ಲಪ್ಪ ಹಂಡಿಭಾಗ್, 2008 ರಲ್ಲಿ ಪೊಲೀಸ್ ಕೆಲಸಕ್ಕೆ ಸೇರಿದ್ದರು. ಅವರು ತಾವು ವಾಸವಾಗಿದ್ದ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಜುಲೈ 4 ರಂದು ಚಿಕ್ಕಮಗಳೂರು ಡಿ.ವೈ.ಎಸ್.ಪಿ. ಯಾಗಿದ್ದ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣ ರಾಜ್ಯದಾದ್ಯಂತ ಭಾರಿ ಸುದ್ದಿ ಮಾಡಿತ್ತು. ಈಗ ಅವರ ಸಹೋದರ ಆತ್ಮಹತ್ಯೆಗೆ ಶರಣಾಗಿರುವುದು ಮತ್ತೊಂದು ವಿಪರ್ಯಾಸ.ಈ ಪ್ರಕರಣದ ಕುರಿತು ಇನ್ನೂ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

► Follow us on –  Facebook / Twitter  / Google+

Facebook Comments

Sri Raghav

Admin