ಬೆಟ್ಟಿಂಗ್ : ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ipl

ಕೊಡಗು,ಅ.26-ಐಪಿಎಲ್ ಬೆಟ್ಟಿಂಗ್ ದಂಧೆಕೋರರ ಕಿರುಕುಳದಿಂದ ನೊಂದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ಕಿರಿಬಳಹ ಗ್ರಾಮದ ನಿವಾಸಿ ಮೋಹನ್(33) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಹೆಚ್ಚು ದುಡ್ಡು ಮಾಡುವ ಆಸೆಯಿಂದ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಮೋಹನ್, ಕಳೆದ ಐಪಿಎಲ್ ಆವೃತ್ತಿಯಲ್ಲಿ ಉದಯ್ ಮತ್ತು ತೇಜರೊಂದಿಗೆ ಬೆಟ್ಟಿಂಗ್ ಕಟ್ಟಿ ಸೋತ್ತಿದ್ದ. ಉದಯ್ ಮತ್ತು ತೇಜ ಅವರು ಮೋಹನ್‍ಗೆ ಬೆಟ್ಟಿಂಗ್ ಹಣ ನೀಡುವಂತೆ ಪದೇ ಪದೇ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತ ಮೋಹನ್ ತನ್ನ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin