ಮಾತುಕತೆ ಮೂಲಕ ಭಾರತ-ಪಾಕ್ ಭಿನ್ನಾಭಿಪ್ರಾಯ ಶಮನಕ್ಕೆ ಅಮೆರಿಕ ಸಲಹೆ

ಈ ಸುದ್ದಿಯನ್ನು ಶೇರ್ ಮಾಡಿ

John-Kirby

ವಾಷಿಂಗ್ಟನ್, ಅ.28- ಭಾರತ ಮತ್ತು ಪಾಕಿಸ್ತಾನ ಮಾತುಕತೆ ಮೂಲಕ ತನ್ನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಬೇಕೆಂದು ಅಮೆರಿಕ ಉಭಯರಾಷ್ಟ್ರಗಳಿಗೆ ಸಲಹೆ ನೀಡಿದೆ. ಗೂಢಚಾರಿಕೆ ಆರೋಪದ ಮೇಲೆ ಪಾಕಿಸ್ತಾನ ಹೈಕಮಿಷನರ್ ಕಚೇರಿಯ ಸಿಬ್ಬಂದಿ ಉಚ್ಚಾಟನೆ ಬಳಿಕ ತಲೆದೋರಿರುವ ರಾಜತಾಂತ್ರಿಕ ಬಿಕ್ಕಟ್ಟಿನ ಬೆನ್ನಲ್ಲೇ ಅಮೆರಿಕದ ಈ ಹೇಳಿಕೆ ನೀಡಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ತಲೆದೋರಿಸುವ ರಾಜತಾಂತ್ರಿಕ ಬಿಕ್ಕಟ್ಟಿನ ವರದಿಗಳನ್ನು ನಾನು ನೋಡಿದ್ದೇವೆ.

ಈ ಭಿನ್ನಾಭಿಪ್ರಾಯಗಳನ್ನು ಈ ಎರಡೂ ದೇಶಗಳು ಮಾತಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ವಿದೇಶಾಂಗ ಇಲಾಖೆ ವಕ್ತಾರ ಜಾನ್ ಕಿರ್ಬಿ ತಮ್ಮ ದೈನಂದಿನ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇದು ಭಾರತ ಮತ್ತು ಪಾಕಿಸ್ತಾನಕ್ಕೆ ಸಂಬಂಧಪಟ್ಟ ವಿಷಯ. ಈ ಬಗ್ಗೆ ಪರಸ್ಪರ ಸಮಾಲೋಚನೆ ನಡೆಸಿ ವಿವಾದವನ್ನು ಇತ್ಯರ್ಥಗೊಳಿಸುವುದು ಸೂಕ್ತ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin