ವಾಂತಿ-ಬೇಧಿಯಿಂದ ಬಳಲುತ್ತಿದ್ದ ಮೂವರು ಒಂದೇ ದಿನ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Dead-Body

ಕಲಬುರಗಿ, ಅ.29- ವಾಂತಿ-ಬೇಧಿಯಿಂದ ಬಳಲುತ್ತಿದ್ದ ಮೂವರು ಒಂದೇ ದಿನ ಮೃತಪಟ್ಟಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಹಿಪ್ಪರಗಾ ಎನ್‍ಎಸ್ ಗ್ರಾಮದಲ್ಲಿ ನಡೆದಿದ್ದು, ಇಡೀ ಗ್ರಾಮದ ಜನ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಎನ್‍ಎಸ್ ಗ್ರಾಮದ ಶಿವಶರಣಪ್ಪ (90), ಮಲ್ಲಪ್ಪ ಗುತ್ತರಗಿ (50), ಮರಪ್ಪ ಗೌಂಡಿ (27) ವಾಂತಿ-ಬೇಧಿಯಿಂದ ಮೃತಪಟ್ಟಿದ್ದಾರೆ.ಕಳೆದ ಎರಡು ದಿನಗಳಿಂದ ಗ್ರಾಮದ ಬಹಳಷ್ಟು ಮಂದಿ ವಾಂತಿ-ಬೇಧಿಯಿಂದ ಬಳಲುತ್ತಿದ್ದಾರೆ. ಸರಿಯಾದ ಚಿಕಿತ್ಸೆ ಸಿಗದೆ ಒಂದೇ ದಿನ ಮೂವರು ಮೃತಪಟ್ಟಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಿವರಾಜ ಸಜ್ಜನಶೆಟ್ಟಿ ಭೇಟಿ ನೀಡಿದ್ದಾರೆ. ತಾಲೂಕು ಆರೋಗ್ಯಾಧಿಕಾರಿ ಹಾಗೂ ಸಿಬ್ಬಂದಿ ಗ್ರಾಮದಲ್ಲೇ ಮೊಕ್ಕಾಂ ಹೂಡಿದ್ದು, ಗ್ರಾಮಸ್ಥರಿಗೆ ಧೈರ್ಯ ತುಂಬಿ ರೋಗ ಉಲ್ಬಣಿಸದಂತೆ ಕ್ರಮ ಕೈಗೊಂಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin