ಹಲ್ಲು ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Teeth

ಬೆಂಗಳೂರು, ಅ.29-ಹಲ್ಲು ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಪಿಯುಸಿ ವ್ಯಾಸಂಗ ಮಾಡುತ್ತಿದ್ದ ನವೀನ್‍ಕುಮ್(18) ಮೃತಪಟ್ಟ ವಿದ್ಯಾರ್ಥಿ.  ಕೆ.ಆರ್.ಪುರದ ಸ್ವಾತಂತ್ರ್ಯ ನಗರ ನಿವಾಸಿಯಾದ ನವೀನ್‍ಕುಮಾರ್ ಹಲವಾರು ದಿನಗಳಿಂದ ಹಲ್ಲು ನೋವಿನಿಂದ ಬಳಲುತ್ತಿದ್ದರು. ಈತನ ಪೋಷಕರು ವೈಟ್‍ಫೀಲ್ಡ್‍ನ ವೈದೇಹಿ ಆಸ್ಪತ್ರೆಗೆ ದಾಖಲಿಸಿದ್ದರು.  ಈ ನಡುವೆ ನವೀನ್‍ಕುಮಾರ್ ಮೃತಪಟ್ಟಿದ್ದು , ವಿಷಯ ತಿಳಿದ ಸಂಬಂಧಿಕರು ಆಸ್ಪತ್ರೆ ಮುಂದೆ ಜಮಾಯಿಸಿ ವೈದ್ಯರ ನಿರ್ಲಕ್ಷ್ಯದಿಂದ ನವೀನ್‍ಕುಮಾರ್ ಸಾವನ್ನಪ್ಪಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿ ಹಿರಿಯ ವೈದ್ಯರು ಸ್ಥಳಕ್ಕಾಗಮಿಸುವಂತೆ ಪಟ್ಟು ಹಿಡಿದರು.

ನವೀನ್‍ಕುಮಾರ್ ಮೃತಪಟ್ಟು 20 ಗಂಟೆಯಾದರೂ ಮರಣೋತ್ತರ ಪರೀಕ್ಷೆಗೆ ಒಳಪಡಿಸದೆ ಇರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಕೆ.ಆರ್.ಪುರ ಪೊಲೀಸರು ಸ್ಥಳಕ್ಕಾಗಮಿಸಿ ನೆರೆದಿದ್ದವರನ್ನು ಸಮಾಧಾನಪಡಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin