ಪ್ರತ್ಯೇಕ ರಾಜ್ಯ ‘ಕಲ್ಯಾಣ ಕರ್ನಾಟಕ’ಕ್ಕಾಗಿ ಕೂಗು : 30 ಜನರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Arrest-01

ಕಲಬುರಗಿ, ನ.1- ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಜಾಗೃತಿ ಸಮಿತಿ ಕಾರ್ಯಕರ್ತರು ಕರ್ನಾಟಕ ರಾಜ್ಯೋತ್ಸವವಾದ ಇಂದು ಪ್ರತ್ಯೇಕ ರಾಜ್ಯ ಧ್ವಜಾರೋಹಣ ಮಾಡಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು 30ಕ್ಕೂ ಹೆಚ್ಚು ಜನರನ್ನು ಬಂಧಿಸಿದರು. ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ಧ್ವಜಾರೋಹಣ ಮಾಡಲು ಮುಂದಾಗಿದ್ದ ಸಂದರ್ಭದಲ್ಲಿ ಮಾಹಿತಿ ತಿಳಿದ ಪೊಲೀಸರು ಸಮಿತಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಹೈದರಾಬಾದ್ ಕರ್ನಾಟಕ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ. ನಮಗೆ ಪ್ರತ್ಯೇಕ ರಾಜ್ಯದ ಅಗತ್ಯವಿದೆ. ಇಲ್ಲದಿದ್ದರೆ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ್ ನರಿಬೋಳ ನೇತೃತ್ವದಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ ನಡೆಸಿದಾಗ ಪೊಲೀಸರು 30ಕ್ಕೂ ಹೆಚ್ಚು ಜನರನ್ನು ಬಂಧಿಸಿದರು.  ನಗರದ ಕೋರ್ಟ್ ರಸ್ತೆಯಲ್ಲಿಯೇ ಕಾರ್ಯಕರ್ತರನ್ನು ತಡೆದು ಕರೆದೊಯ್ಯಲಾಯಿತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

► Follow us on –  Facebook / Twitter  / Google+

Facebook Comments

Sri Raghav

Admin