2ನೇ ಬಾರಿಗೆ ರಾಹುಲ್ ಗಾಂಧಿ ಪೊಲೀಸರ ವಶಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

Rahul-Gandhi--011

ನವದೆಹಲಿ.ನ.02 : ಒಆರ್ ಒಪಿಗಾಗಿ ಆತ್ಮಹತ್ಯೆಗೆ ಶರಣಾಗಿದ್ದ ಮಾಜಿ ಸೈನಿಕ ರಾಮ್ ಕಿಶನ್ ಗರೆವಾಲ್ ಕುಟುಂಬದ ಭೇಟಿಗೆ ಪ್ರಯತ್ನಿಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪೊಲೀಸರು ಎರಡನೇ ಬಾರಿಗೆ ವಶಕ್ಕೆ ಪಡೆದು ಅವರ ಜೊತೆಗಿದ್ದ ಜ್ಯೋತಿರಾದಿತ್ಯ ಸಿಂದಿಯಾ ಹಾಗೂ ಅಜಯ್ ಮಕೆನ್ ಸೇರಿದಂತೆ ಇತರೆ ಕಾಂಗ್ರೆಸ್ ನಾಯಕರನ್ನು ಪೊಲೀಸ್ ವಾಹನದಲ್ಲಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ನಂತರ ಬಿಡುಗಡೆ ಮಾಡಿದ್ದಾರೆ.  ಇದಕ್ಕೂ ಮುನ್ನ ಮಾಜಿ ಸೈನಿಕ ರಾಮ್ ಕಿಶನ್ ಕುಟುಂಬದ ಭೇಟಿಗಾಗಿ ಆಸ್ಪತ್ರೆಯ ಬಳಿ ಬಂದಿದ್ದ ರಾಹುಲ್ ಗಾಂಧಿ ಅವರನ್ನು ಪೊಲೀಸರು ಮಂದಿರ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಇರಿಸಿದ್ದರು. 70 ನಿಮಿಷಗಳು ಪೊಲೀಸರು ವಶಕ್ಕೆ ಪಡೆದಿದ್ದರು.

ಇದೆ ವೇಳೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹ ದೆಹಲಿ ಪೋಲೀಸರ ವಿರುದ್ಧ ಆರೋಪ ಮಾಡಿದ್ದು, ಮೃತ ಯೋಧನ ಕುಟುಂಬವನ್ನು ಭೇಟಿ ಮಾಡಲು ಪೊಲೀಸರು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ” ನನ್ನ ವಾಹನವನ್ನು ಸುತ್ತುವರೆದಿರುವ ಪೊಲೀಸರು ನನಗೆ ಮೃತ ಯೋಧನ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಬಿಡುತ್ತಿಲ್ಲ” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಒಂದು ಶ್ರೇಣಿ ಒಂದು ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಮನವಿ ಸಲ್ಲಿಸಲು ಬಂದಿದ್ದ ಮಾಜಿ ಸೈನಿಕ ರಾಮ್ ಕಿಶನ್ ಗ್ರಿವಾಲ್(70) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಹರಿಯಾಣದ ಭಿವಾನಿ ಜಿಲ್ಲೆಯ ರಾಮ್ ಕಿಶನ್, ಜವಾಹರ್ ಭವನದ ಹಿಂಭಾಗದಲ್ಲಿ ನಿನ್ನೆ ಸಂಜೆ ವಿಷ ಸೇವನೆ ಮಾಡಿದ್ದರು. ಒಂದು ಶ್ರೇಣಿ ಒಂದು ಪಿಂಚಣಿ ಯೋಜನೆ ಕುರಿತಾಗಿ ರಾಮ್ ಕಿಶನ್ ರಕ್ಷಣಾ ಸಚಿವಾಲಯಕ್ಕೆ ಮನವಿ ಸಲ್ಲಿಸಲು ಬಂದಿದ್ದರು. ಅವರು ಸೇನೆ ಹಾಗೂ ರಕ್ಷಣಾ ಭದ್ರತಾ ಸಿಬ್ಬಂದಿಯಾಗಿ 30 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin