ನಿಗಮ-ಮಂಡಳಿ ನೇಮಕಾತಿ ಸೃಷ್ಟಿಸಿದ ಅಸಮಾಧಾನ : ಗೋಪಾಲಕೃಷ್ಣ ಅತೃಪ್ತಿ

ಈ ಸುದ್ದಿಯನ್ನು ಶೇರ್ ಮಾಡಿ

NYGopalakrishna

ಬಳ್ಳಾರಿ, ನ.3- ರಾಜ್ಯದಲ್ಲಿ ನಿಗಮ-ಮಂಡಳಿ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಎನ್.ವೈ.ಗೋಪಾಲಕೃಷ್ಣಗೆ ಜವಾಬ್ದಾರಿ ನೀಡಿರುವುದಕ್ಕೆ ಅವರು ಅತೃಪ್ತಿಗೊಂಡಿದ್ದಾರೆ. ಅರ್ಹರಿಗೆ ಪೂರಕವಾದ ಹುದ್ದೆ ಸಿಕ್ಕಿಲ್ಲ ಎಂದು ಸಿಎಂ ವಿರುದ್ಧ ಅಸಮಾಧಾನಗೊಂಡಿದ್ದಾರೆ. ತಮ್ಮ ಆಪ್ತರೆದುರು ಅಸಮಾಧಾನ ವ್ಯಕ್ತಪಡಿಸಿರುವ ಗೋಪಾಲಕೃಷ್ಣ ಅವರು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೆ. ಸದ್ಯ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕನಾಗಿದ್ದೇನೆ. ಐದು ಬಾರಿ ಶಾಸಕನಾದರೂ ನಮ್ಮ ಸೇವಾ ಹಿರಿತನವನ್ನು ಪರಿಗಣಿಸಿಲ್ಲ ಎಂಬ ಬೇಸರವಿದೆ. ಈ ಹುದ್ದೆಯನ್ನು ನಿರ್ವಹಿಸಬೇಕೆ, ಬೇಡವೆ ಎಂಬ ಬಗ್ಗೆ ಕ್ಷೇತ್ರದ ಜನತೆ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಅವರು ತಿಳಿಸಿದರು.

ನಿಗಮ-ಮಂಡಳಿಗಳಲ್ಲಿ ಸ್ಥಾನ ಪಡೆಯಲು ನಾನು ಯಾವುದೇ ಲಾಬಿ ಮಾಡಿದವನಲ್ಲ. ಆ ಜಾಯಮಾನವೂ ಕೂಡ ನನ್ನದಲ್ಲ. ಹೈಕಮಾಂಡ್ ಸೇವೆ ಪರಿಗಣಿಸಿ ಜವಾಬ್ದಾರಿ ನೀಡಿದರೆ ನಿರ್ವಹಿಸುವುದು ನನ್ನ ಕರ್ತವ್ಯ ಎಂದು ಹೇಳಿದರು.

► Follow us on –  Facebook / Twitter  / Google+

Facebook Comments

Sri Raghav

Admin