ಇದೆ ಮೊದಲ ಬಾರಿಗೆ ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ ಎತ್ತಿಹಿಡಿದ ಭಾರತೀಯ ಮಹಿಳೆಯರು

ಈ ಸುದ್ದಿಯನ್ನು ಶೇರ್ ಮಾಡಿ

Women-Hocky

ಸಿಂಗಾಪೂರ್ ನ.05 : ಮಹಿಳೆಯರ ಏಷ್ಯನ್ ಚಾಂಪಿಯನ್ಸ್ ಹಾಕಿ ಟೂರ್ನಿಯ ಫೈನಲ್ ನಲ್ಲಿ ಭಾರತ ತಂಡ 2-1 ಗೋಲುಗಳ ಅಂತರದಿಂದ ಚೀನಾವನ್ನು ಸೋಲಿಸುವ ಮೂಲಕ ಇದೇ ಮೊದಲ ಬಾರಿಗೆ 4 ನೇ ಚಾಂಪಿಯನ್ಸ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಸತತ ಎರಡು ಗೆಲುವುಗಳಿಂದ ಫೈನಲ್ ಪ್ರವೇಶಿಸಿದ್ದ ಭಾರತ, ಇಂದು ನಡೆದ ಫೈನಲ್ ನಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ನಾಲ್ಕನೇ ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.

2010ನೇ ಆವೃತ್ತಿಯಲ್ಲಿ 3ನೇ ಸ್ಥಾನ ಗಳಿಸಿದ್ದ ಭಾರತ, 2011ರಲ್ಲಿ ನಾಲ್ಕನೆ ಸ್ಥಾನಗಳಿಸಿತ್ತು. 2013ರಲ್ಲಿ ನಡೆದ ಮೂರನೇ ಆವೃತ್ತಿಯಲ್ಲಿ ಮೊದಲ ಬಾರಿ ಫೈನಲ್ ಪ್ರವೇಶಿಸಿದ್ದ ಭಾರತದ ಮಹಿಳೆಯರು, ಜಪಾನ್ ವಿರುದ್ಧ 0-1 ಅಂತರದಲ್ಲಿ ಸೋತು ರನ್ನರ್ ಅಪ್ ಸ್ಥಾನಕ್ಕೆ ತಪ್ತಿ ಪಟ್ಟಿದ್ದರು.

ಈ ಸಾಧನೆ ಮಾಡಿದ್ದಕ್ಕಾಗಿ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ, ಪ್ರಧಾನಿ ಮೋದಿ  ಎಲ್ಲೆಡೆಯಿಂದ ಅಭಿನಂದನೆಯ ಮಳೆ ಸುರಿಯುತ್ತಿದೆ. ಮಾಜಿ ಕ್ರಿಕೆಟ್ ಪಟು ಸಚಿನ್ ತೆಂಡೂಲ್ಕರ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಜ್ಯವರ್ಧನ್ ರಾಥೋಡ್ ಮುಂತಾದವರು ಭಾರತೀಯ ತಂಡವನ್ನು ಅಭಿನಂದಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin