ಗಾಂಜಾ ಮಾರಾಟ ಮಾಡುತ್ತಿದ್ದವನ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು,ನ.5- ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ನಗರದ ಸಿಸಿಬಿ ಪೊಲೀಸರು ಬಂಧಿಸಿ 1 ಕೆಜಿ 400 ಗ್ರಾಂ ತೂಕದ ಗಾಂಜಾ ಹಾಗೂ 3,950 ನಗದನ್ನು ವಶಪಡಿಸಿಕೊಂಡಿದ್ದಾರೆ. ಅಸ್ಲಾಂ(42) ಬಂಧಿತ ಆರೋಪಿ. ನಗರದ ಕ್ಯಾತಮಾರನಹಳ್ಳಿಯ ಹರಿಶ್ಚಂದ್ರಘಾಟ್ ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಐಟಿ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಅವರಿಗೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದನು. ಈ ಬಗ್ಗೆ ಅಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರ ಹಿನ್ನೆಲೆಯಲ್ಲಿ ಸಿಸಿಬಿಯ ಎಸಿಪಿ ಗೋಪಾಲ್ ನೇತೃತ್ವದಲ್ಲಿ ಇನ್‍ಸ್ಪೆಕ್ಟರ್ ಪ್ರಸನ್ನಕುಮಾರ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಅಸ್ಲಾಂನನ್ನು ಬಂಧಿಸಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

► Follow us on –  Facebook / Twitter  / Google+

Facebook Comments

Sri Raghav

Admin