ಬಸ್ ಡಿಕ್ಕಿ : 20 ಮಹಿಳಾ ಗಾರ್ಮೆಂಟ್ಸ್ ನೌಕರರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

ACCIDENT77
ಕೊರಟಗೆರೆ,ನ.5-
ಗಾರ್ಮೆಂಟ್ಸ್ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಮಿನಿಬಸ್‍ಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 20 ಮಹಿಳಾ ಗಾರ್ಮೆಂಟ್ಸ್ ನೌಕರರು ಸಣ್ಣಪುಟ್ಟ ಗಾಯಗೊಂಡಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ದೊಡ್ಡಬಳ್ಳಾಪುರದಲ್ಲಿರುವ ಗಾರ್ಮೆಂಟ್ಸ್‍ನ ಮಹಿಳಾ ನೌಕರರನ್ನು ಕರೆದೊಯ್ಯುತ್ತಿದ್ದ ಮಿನಿಬಸ್‍ಗೆ ಪೆಮ್ಮದೇವರಹಳ್ಳಿ ಬಳಿ ರಾತ್ರಿ 8 ಗಂಟೆ ಸಮಯದಲ್ಲಿ ಅತಿವೇಗವಾಗಿ ಬಂದ ಖಾಸಗಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಿನಿ ಬಸ್‍ನಲ್ಲಿದ್ದ 20ಕ್ಕೂ ಹೆಚ್ಚು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಎಸ್‍ಐ ಮಂಜುನಾಥ್ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಬಸ್‍ನ ಚಾಲಕ ಪರಾರಿಯಾಗಿದ್ದು , ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

► Follow us on –  Facebook / Twitter  / Google+

Facebook Comments

Sri Raghav

Admin