ಬಿಜೆಪಿ ಪಕ್ಷದ ಸಂಘಟನೆಗೆ ಒತ್ತು ನೀಡಿ

ಈ ಸುದ್ದಿಯನ್ನು ಶೇರ್ ಮಾಡಿ

BJP

ತುಮಕೂರು, ನ.5- ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ಪಕ್ಷವನ್ನು ಸಂಘಟಿಸುವುದು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ತುಮಕೂರು ನಗರದಲ್ಲಿಯೂ ಪಕ್ಷವನ್ನು ಸದೃಢಗೊಳಿಸಬೇಕಿದೆ ಎಂದು ಬಿಜೆಪಿ ನಗರ ಸ್ಲಂ ಮೋರ್ಚಾ ಅಧ್ಯಕ್ಷರಾದ ಎಂ. ಗೋಪಿ ಕರೆ ನೀಡಿದರು. ಮರಳೂರು ದಿಣ್ಣೆಯ ವೃತ್ತದಲ್ಲಿ ಏರ್ಪಡಿಸಿದ್ದ ಬಿಜೆಪಿ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಮಾತನಾಡುತ್ತಿದ್ದರು.ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಜನಪರ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ದಲಿತ, ಹಿಂದುಳಿದವರ, ಬಡವರ ಬಗ್ಗೆ ಕಾಳಜಿ ಹೊಂದೆ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದರು. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಲಿತ, ಹಿಂದುಳಿದ, ಬಡವರ ಪರ ಯಾವುದೇ ಯೋಜನೆಗಳು ಜಾರಿಯಾಗಿಲ್ಲ ಎಂದು ಆರೋಪಿಸಿದರು.

ಬಿಜೆಪಿ ಸ್ಲಂ ಮೋರ್ಚಾ ಜಿಲ್ಲಾಧ್ಯಕ್ಷ ಟಿ.ಎನ್. ಕೃಷ್ಣಪ್ಪ ಮಾತನಾಡಿ ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ಮುಟ್ಟಿಸುವಲ್ಲಿ ಬಿಜೆಪಿ ಕಾರ್ಯಕರ್ತರು ಮುಂದಾಗಬೇಕೆಂದು ತಿಳಿಸಿದರು. ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಶಬ್ಬೀರ್ ಅಹಮದ್ ಮಾತನಾಡಿ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಮೇಲೆ ದಬ್ಬಾಳಿಕೆ, ದಲಿತರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಬಿಜೆಪಿ ಕಾರ್ಯಕರ್ತರು ಪಕ್ಷವನ್ನು ಸದೃಢವಾಗಿ ಸಂಘಟಿಸಿ ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವಲ್ಲಿ ಶ್ರಮಿಸಬೇಕೆಂದು ಹೇಳಿದರು.

ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಪ್ರೇಮಾ ಹೆಗ್ಗಡೆ ಮಾತನಾಡಿ, ಬಿಜೆಪಿ ನಗರ ಸ್ಲಂ ಮೋರ್ಚಾ ಅಧ್ಯಕ್ಷರಾದ ಎಂ.ಗೋಪಿ ಅವರು ಬಿಜೆಪಿ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿಯುತ್ತಿದ್ದು, ಬಡವರಿಗೆ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಕೆಲಸ ಮಾಡಿಕೊಟ್ಟಿರುವುದು ಶ್ಲಾಘನೀಯ ಎಂದರು. ಬಿಜೆಪಿ ನಗರ ಸ್ಲಂ ಬೋರ್ಡ್ ಪ್ರಧಾನಕಾರ್ಯದರ್ಶಿಯಾಗಿ ಮೋಹನ್, ಉಪಾಧ್ಯಕ್ಷರನ್ನಾಗಿ ಷಣ್ಮುಗಂ, ಮಹಮದ್ ಆದಿಲ್, ಸದಸ್ಯರನ್ನಾಗಿ ಜನಾರ್ಧನ್, ಅಭಿಷೇಕ್, ಸೋಮೇಶನಾಯ್ಕ್, ರಾಜು, ಹೇಮರಾಜ್ ಅವರನ್ನು ಬಿಜೆಪಿ ನಗರ ಸ್ಲಂ ಮೋರ್ಚಾ ಅಧ್ಯಕ್ಷರಾದ ಎಂ. ಗೋಪಿ ಆಯ್ಕೆ ಮಾಡಿದರು.ಬಿಜೆಪಿ ಸ್ಲಂ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ, ಪರಿಶಿಷ್ಟ ವರ್ಗ ಮೋರ್ಚಾ ನಗರಾಧ್ಯಕ್ಷ ಚಂದ್ರು, ಮೀಸೆರಾಜು, ಅಭಿಷೇಕ್, ಚಂದ್ರ ರಂಗಸ್ವಾಮಿ, ಶಿದ್ದಿಕ್‍ಪಾಷ, ಬಸವರಾಜು ಹಾಜರಿದ್ದರು.

 

► Follow us on –  Facebook / Twitter  / Google+

 

Facebook Comments

Sri Raghav

Admin