ರೋಷನ್ ಬೇಗ್ ಮೇಲಿನ ಆರೋಪ ನಿರಾಧಾರ : ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

siddu

ಬೆಂಗಳೂರು, ನ.5-ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಅವರ ಹತ್ಯೆ ಪ್ರಕರಣದಲ್ಲಿ ಸಚಿವ ರೋಷನ್‍ಬೇಗ್ ಪಾತ್ರವಿದೆ ಎಂಬ ಬಿಜೆಪಿ ಆರೋಪ ಶುದ್ಧ ಸುಳ್ಳು, ಸಮಾಜದ ಸ್ವಾಸ್ಥ್ಯ ಕೆಡಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯಕಾರಣ ಕಾರಣಕ್ಕಾಗಿ  ಬಿಜೆಪಿ ಸಮಾಜದ ಸ್ವಾಸ್ಥ್ಯ ಕೆಡಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಸುಳ್ಳು ಆರೋಪ ಮಾಡುವುದು, ಕೋಮು ಭಾವನೆ ಕೆರಳಿಸಿ, ಗಲಭೆ ಸೃಷ್ಟಿಸುವುದು ಅವರ ಹವ್ಯಾಸ ಎಂದು ಹರಿಹಾಯ್ದರು. ರೋಷನ್ ಬೇಗ್ ಅವರ ಮೇಲೆ ಮಾಡಿರುವ ಆರೋಪ ಆಧಾರ ರಹಿತ. ರಾಜಕೀಯ ಕಾರಣಕ್ಕೆ ಬಾಯಿಗೆ ಬಂದಂತೆ ಮಾತನಾಡಬಾರದು ಎಂದು ಸಿಎಂ ತಿರುಗೇಟು ನೀಡಿದರು.

ಶಿವಾಜಿನಗರದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಅವರನ್ನು ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ಸುಪಾರಿ ಕೊಟ್ಟು ಕೊಲ್ಲಿಸಿದ್ದಾರೆ ಎಂದು ಸಂಸದೆ ಶೋಭಾಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದರು. ಇದು ಸುಳ್ಳು ಆರೋಪ ಎಂದು ರೋಷನ್ ಬೇಗ್ ಸ್ಪಷ್ಟೀಕರಣ ನೀಡಿದ್ದಾರೆ.  ಇಂದು ಸಚಿವರ ಬೆಂಬಲಕ್ಕೆ ನಿಂತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.  ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಕೆಲವು ಆರೋಪಿಗಳು ಬಂತರಾಗಿದ್ದು, ಈಗ ರಾಜಕೀಯ ತಿರುವು ಪಡೆದುಕೊಂಡಿದೆ.

► Follow us on –  Facebook / Twitter  / Google+

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin