ಸಕಾಲಕ್ಕೆ ಬಾರದ ಆ್ಯಂಬುಲೆನ್ಸ್, ಬಸ್‍ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಈ ಸುದ್ದಿಯನ್ನು ಶೇರ್ ಮಾಡಿ

Baby-0052

ಚಿತ್ರದುರ್ಗ, ನ.5- ತೀವ್ರ ಹೆರಿಗೆ ನೋವು ಕಂಡು ಬಂದ ಹಿನ್ನೆಲೆಯಲ್ಲಿ ಬಸ್‍ನಲ್ಲೇ ಮಹಿಳೆಯರೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ತಾಲ್ಲೂಕಿನ ವಿಜಯಪುರ ಬಳಿ ನಡೆದಿದೆ.ಸಕಾಲಕ್ಕೆ ಆ್ಯಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಚಿತ್ರದುರ್ಗ-ದಾವಣಗೆರೆ ಮಾರ್ಗವಾಗಿ ಸಂಚರಿಸುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಗರ್ಭಿಣಿ ಸುಜಾತ ಅವರನ್ನು ಹೆರಿಗೆಗಾಗಿ ಆಸ್ಪತ್ರೆಗೆ ಕರೆತರಲಾಗುತ್ತಿತ್ತು. ವಿಜಯಪುರ ಬಳಿ ತೀವ್ರ ಹೆರಿಗೆ ನೋವು ಕಾಣಿಸಿಕೊಂಡು ಬಸ್‍ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.ತೀವ್ರ ರಕ್ತಸ್ರಾವದಿಂದ ಬಳಲುತ್ತಿರುವ ಸುಜಾತ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin