ಬಸ್ ಉರುಳಿ ಬಿದ್ದು ನಾಲ್ವರ ಸಾವು, 40 ಮಂದಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Bus

ಸೋಲ್ (ಸೌತ್ ಕೊರಿಯಾ), ನ.6- ಚಾಲಕನ ನಿಯಂತ್ರಣ ತಪ್ಪಿ ಬಸ್ ಉರುಳಿದ ಪರಿಣಾಮ ನಾಲ್ವರು ಮೃತಪಟ್ಟು , 40 ಮಂದಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ದಕ್ಷಿಣ ಕೊರಿಯಾದ ಡೈಜೋನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಬಸ್‍ನಲ್ಲಿ 45 ಮಂದಿ ಪ್ರಯಾಣಿಸುತ್ತಿದ್ದರು, ಇದರಲ್ಲಿ ಕೆಲವರು ಬಸ್‍ನ ಟಾಪ್‍ನಲ್ಲಿ ಕುಳಿತ್ತಿದ್ದರು, ಆ ವೇಳೆ ಬಸ್ ಉರುಳಿ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ. ಆದರೆ ನಾನು ಸೀಟ್ ಬೆಲ್ಟ್ ಧರಿಸಿದ್ದರಿಂದ ಅನಾಹುತದಿಂದ ಪಾರಾಗಿದ್ದೇನೆ ಎಂದು 70ರ ವೃದ್ಧ ಜಾನ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು , ಅವರಲ್ಲಿ 8 ಜನರ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.  ಈ ಅವಘಾತದಿಂದ 1 ಗಂಟೆಗಿಂತಲೂ ಹೆಚ್ಚು ಸಮಯ ಟ್ರಾಫಿಕ್ ಜಾಮ್ ಉಂಟಾಗಿತ್ತು. ಡೈಜೋನ್ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿ ದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin