ಆಗುಂಬೆಯಲ್ಲಿ ಉಪವಾಸ ಕುಳಿತ ಕಿಮ್ಮನೆ

ಈ ಸುದ್ದಿಯನ್ನು ಶೇರ್ ಮಾಡಿ

Kimmanane-Ratnakara

ಶಿವಮೊಗ್ಗ ನ.07 : ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆಯಲ್ಲಿ ಕಿಮ್ಮನೆ ರತ್ನಾಕರ್ 7 ಗಂಟೆವರೆಗೆ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ರೈತರು, ಬಗರ್ ಹುಕುಂ ಸಾಗುವಳಿದಾರರಿಗೆ ಅರಣ್ಯ ಇಲಾಖೆಯಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಮಾಜಿ ಸಚಿವ ಹಾಗೂ ಶಾಸಕ ಕಿಮ್ಮನೆ ರತ್ನಾಕರ್ ಹೋರಾಟ ನಡೆಸಿದ್ದಾರೆ. ಮೊದಲಿಗೆ ಕಿಮ್ಮನೆ ರತ್ನಾಕರ್ ಒಬ್ಬರೇ ಸತ್ಯಾಗ್ರಹ ಕುಳಿತಿದ್ದರು. ಬಳಿಕ ಅವರ ಬೆಂಬಲಿಗರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ. ಈ ಭಾಗದಲ್ಲಿ ಕಾಡಾನೆ ದಾಳಿಯಿಂದ ರೈತರ ಬೆಳೆಗಳು ಹಾಳಾಗುತ್ತಿದ್ದು, ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರೂ, ಸ್ಪಂದಿಸಿಲ್ಲ ಎಂದು ಕಿಮ್ಮನೆ ರತ್ನಾಕರ್ ದೂರಿದ್ದಾರೆ. ಸಾಗುವಳಿದಾರರು ಜಮೀನಿಗೆ ತೆರಳಲು ಕೂಡ ಅರಣ್ಯ ಇಲಾಖೆ ಸಿಬ್ಬಂದಿ ಅವಕಾಶ ನೀಡದೆ ಕಿರುಕುಳ ನೀಡುತ್ತಿದ್ದಾರೆ. ಕಾಡಾನೆ ದಾಳಿಯಿಂದ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಿಲ್ಲ ಎಂದು ಆರೋಪಿಸಿದ್ದಾರೆ. ಕೂಡಲೇ ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin