ಕೇಂದ್ರದ ಮಾಜಿ ಸಚಿವೆ ಜಯವಂತಿಬೆನ್ ಮೆಹ್ತಾ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

Jaywantiben-Mehta

ಮುಂಬೈ , ನ.7- ಕೇಂದ್ರದ ಮಾಜಿ ಸಚಿವೆ ಮತ್ತು ಬಿಜೆಪಿ ನಾಯಕಿ ಜಯವಂತಿಬೆನ್ ಮೆಹ್ತಾ ಇಂದು ಮುಂಜಾನೆ ಮುಂಬೈನಲ್ಲಿ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು.
ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ 1996 ರಿಂದ 1999ರವರೆಗೆ ಸಚಿವರಾಗಿ ಸೇವೆ ಸಲ್ಲಿಸಿದ್ದ ಅವರು ಬಿಜೆಪಿ-ಜನಸಂಘದ ನಾಯಕಿಯಾಗಿ ಪ್ರಖ್ಯಾತರಾಗಿದ್ದರು.  ಪಾಲಿಕೆ ಸದಸ್ಯರಾಗಿ, ಶಾಸಕರಾಗಿ, ಸಂಸದರಾಗಿ ಮತ್ತು ಕೇಂದ್ರ ಸಚಿವರಾಗಿ ಹಂತಹಂತವಾಗಿ ಮೇಲೆ ಬಂದಿದ್ದ ಅವರು ಸಮರ್ಥ ಜನಪ್ರತಿನಿಧಿ ಎಂದು ಹೆಸರುಗಳಿಸಿದ್ದರು.  ಕೆಲಕಾಲದಿಂದ ಅಸ್ವಸ್ಥರಾಗಿದ್ದ ಅವರು ಇಂದು ಮುಂಜಾನೆ ನಿಧನರಾದರು. ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳು, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಸೇರಿದಂತೆ ಅನೇಕ ಗಣ್ಯರು ಮತ್ತು ರಾಜಕೀಯ ಪಕ್ಷಗಳ ಮುಖಂಡರು ಬೆನ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮೃತರ ಅಂತ್ಯಕ್ರಿಯೆ ಮುಂಬೈನ ಶಿವಾಜಿಪಾರ್ಕ್ ರುದ್ರಭೂಮಿಯಲ್ಲಿ ನಡೆಯಿತು.

► Follow us on –  Facebook / Twitter  / Google+

Facebook Comments

Sri Raghav

Admin