ಬೇರೊಬ್ಬನ ಜೊತೆ ಫೋನ್’ನಲ್ಲಿ ಬ್ಯುಸಿ ಆದ ಹೆಂಡತಿ, ಮನನೊಂದು ಪತಿ ಆತ್ಮಹತ್ಯೆಗೆ ಯತ್ನ

ಈ ಸುದ್ದಿಯನ್ನು ಶೇರ್ ಮಾಡಿ

Wife-Mobile

ಶಿವಮೊಗ್ಗ,ನ.7- ಪತ್ನಿ ಬೇರೊಬ್ಬ ವ್ಯಕ್ತಿ ಜೊತೆ ನಿರಂತರ ಫೋನ್ ಸಂಭಾಷಣೆಯಲ್ಲಿ ಇರುತ್ತಿದ್ದರಿಂದ ಮನನೊಂದ ಪತಿ ವಿಷ ಸೇವಿಸಿ ಆತ್ನಹತ್ಯೆಗೆ ಯತ್ನಿಸಿರುವ ಘಟನೆ ತುಂಗಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೋಪಾಲ್ ಲೇ ಔಟ್‍ನ ನಿವಾಸಿ ಡಾ.ಕುಟೀನ್ ಆತ್ಮಹತ್ಯೆಗೆ ಯತ್ನಿಸಿದ ವೈದ್ಯ. ಈತ ವೃತ್ತಿಯಲ್ಲಿ ವೈದ್ಯನಾಗಿದ್ದು ಪತ್ನಿಯೂ ಸಹ ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ನಿ ಚರ್ಚ್‍ವೊಂದರ ಫಾದರ್ ಜತೆ ನಿರಂತರ ಫೋನಿನಲ್ಲಿ ಸಂಭಾಷಣೆಯಲ್ಲಿ ತೊಡಗುತ್ತಿದ್ದರು. ಇದರಿಂದ ವೈದ್ಯ ಕುಟೀನ್ ಮನನೊಂದಿದ್ದರು. ಇದೇ ವಿಚಾರವಾಗಿ ನಿನ್ನೆ ರಾತ್ರಿ ಪತಿ-ಪತ್ನಿ ನಡುವೆ ಜಗಳವೂ ಸಹ ನಡೆದಿತ್ತುಎನ್ನಲಾಗಿದೆ.

ಇಂದು ಬೆಳಗ್ಗೆ ಪತ್ನಿ ಕೆಲಸಕ್ಕೆ ತೆರಳಿದ್ದ ವೇಳೆ ಕುಟೀನ್ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿದ್ದಾರೆ. ವಿಷಯ ತಿಳಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ವೈದ್ಯನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin