ಮಾಗಳಿ ರವಿ ಅನುಮಾನಾಸ್ಪದ ಸಾವು, ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

BJP-02

ಮೈಸೂರು,ನ.7-ಮಾಗಳಿ ರವಿ ಅನುಮಾನಾಸ್ಪದ ಸಾವು ಹಾಗೂ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಮೈಸೂರಿನಲ್ಲಿಂದು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಂಸದ ಪ್ರತಾಪ್ ಸಿಂಹ, ಶೋಭ ಕರಂದ್ಲಾಜೆ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರ ನೇತೃತ್ವದಲ್ಲಿ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮಾಗಡಿ ರವಿ ಕೊಲೆ ನಡೆದಿದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಲಾಯಿತು. ಆರ್‍ಎಸ್‍ಎಸ್ ಹಾಗೂ ಬಿಜೆಪಿಗೆ ಸೇರಿದ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡಲಾಗುತ್ತಿದೆ. ಈ ಮೂಲಕ ಸರ್ಕಾರ ನಮ್ಮನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಗಂಭೀರ ಆರೋಪ ಮಾಡಿದರು.

ಪಿರಿಯಾಪಟ್ಟಣದಲ್ಲಿ ಶಾಂತಿ ಸೌಹಾರ್ದ ಸಭೆ ಮುಗಿಸಿಕೊಂಡು ಬರುತ್ತಿದ್ದ ಮಾಗಳಿ ರವಿ ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ಇದೆ. ಆದರೆಪೊಲೀಸರು ಅಪಘಾತ ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೂಡಲೇ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಆಗ್ರಹಿಸಲಾಯಿತು. ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದ್ದರೂ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಗಾಗಿ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿರುವುದು ದುರದೃಷ್ಟಕರ. ಜಯಂತಿ ಸಂದರ್ಭದಲ್ಲಿ ಆಗುವ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಕಳೆದ ಬಾರಿ ಟಿಪ್ಪು ಜಯಂತಿ ಸಂದರ್ಭದಲ್ಲಿ ಮಡಿಕೇರಿಯಲ್ಲಿ ಇಬ್ಬರ ಸಾವು ಆಗಿತ್ತು. ರಾಜ್ಯಾದ್ಯಂತ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತವಾಗಿದ್ದರೂ ಸರ್ಕಾರ ಜಯಂತಿ ಆಚರಣೆಗೆ ಮುಂದಾಗಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ. ಈ ಸಂದರ್ಭದಲ್ಲಿ 18 ಕೋಟಿ ರೂ.ಗಳನ್ನು ವೆಚ್ಚ ಮಾಡಿ ಟಿಪ್ಪು ಜಯಂತಿಯನ್ನು ಆಚರಣೆ ಮಾಡುವ ಔಚಿತ್ಯವೇನು ಎಂದು ಪ್ರಶ್ನಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin