ಬಾಲ್ಯವಿವಾಹದ ಬಗ್ಗೆ ಅರಿವು ಅಗತ್ಯ

ಈ ಸುದ್ದಿಯನ್ನು ಶೇರ್ ಮಾಡಿ

nagamangala

ನಾಗಮಂಗಲ, ನ.8- ಬಾಲ್ಯವಿವಾಹವನ್ನು ತಡೆಗಟ್ಟುವುದರಿಂದ ಉತ್ತಮ ಕುಟುಂಬ ಹಾಗೂ ನೆಮ್ಮದಿಯ ಜೀವನ ನಡೆಸಬಹುದಾಗಿದೆ ಎಂದು ಶಾಸಕ ಎನ್.ಚಲುವರಾಯಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.ತಾಲೂಕಿನ ಬೆಳ್ಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಯೋಜಿಸಿದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಜನಜಾಗೃತಿ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಲ್ಯವಿವಾಹಕ್ಕೊಳಗಾಗುವ ಮಕ್ಕಳು ಮಾನಸಿಕ ದೌರ್ಬಲ್ಯತೆಗೆ ಒಳಗಾಗಿ, ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಪ್ರಪಂಚದ ಅರಿವೇ ಇಲ್ಲದ ಮಕ್ಕಳಿಗೆ ವಯಸ್ಸಿಗೆ ಮೀರಿದ ಜವಾಬ್ದಾರಿ ಹೊರಿಸಿದರೆ ಮಾನಸಿಕ ಸ್ಥೈರ್ಯ ಕಳೆದುಕೊಳ್ಳುತ್ತಾರೆ. ಆದ್ದರಿಂದ ಗ್ರಾಮೀಣ ಪ್ರದೇಶದಲ್ಲಿ ಈ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು.

ನಂತರ ವಿವಿಧ ಶಾಲಾ ಮಕ್ಕಳು ಬೆಳ್ಳೂರಿನ ಪ್ರಮುಖ ರಸ್ತೆಗಳಲ್ಲಿ ಜನಜಾಗೃತಿ ಜಾಥ ನಡೆಸಿ, ಬಾಲ್ಯ ವಿವಾಹ ತಡೆಗಟ್ಟುವ ಕುರಿತು ಅರಿವು ಮೂಡಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ದಿವಾಕರ್, ತಾ.ಪಂ. ಅಧ್ಯಕ್ಷ ಆರ್.ಕೃಷ್ಣೇಗೌಡ, ಜಿ.ಪಂ. ಸದಸ್ಯ ಮುತ್ತಣ್ಣ, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ವೆಂಕಟೇಶ್, ತಾಲೂಕು ಸ್ತ್ರೀ ಶಕ್ತಿ ಸಂಘಗಳ ಒಕ್ಕೂಟದ ಅಧ್ಯಕ್ಷ ಯಶೋಧಮ್ಮ, ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ರಾಜನ್, ಮುಖಂಡರಾದ ಯಾಸೀನ್, ಪಾಪಣ್ಣ, ಮಹೇಂದ್ರ ಸೇರಿದಂತೆ ಹಲವರು ಹಾಜರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin