ಮಾಸ್ತಿಗುಡಿ ಟೀಮ್ ವಿರುದ್ಧ ಕೇಸ್ ದಾಖಲು : ಶವಗಳಿಗಾಗಿ NDRF ಹುಡುಕಾಟ

ಈ ಸುದ್ದಿಯನ್ನು ಶೇರ್ ಮಾಡಿ

Mastigudi-01

ಬೆಂಗಳೂರು ನ.08 : ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ತಿಪ್ಪಗೊಂಡನಹಳ್ಳಿ ಜಲಾಶಯದ ನೀರಿನಲ್ಲಿ ಮುಳುಗಿ ಮೃತಪಟ್ಟಿದ ಖಳನಟ ಅನಿಲ್ ಮತ್ತು ಉದಯ್ ಅವರ ಮೃತದೇಹಗಳಿಗಾಗಿ ಬೆಳಿಗ್ಗೆಯಿಂದ ಶೋಧಕಾರ್ಯಾಚರಣೆ ಮುಂದುವರೆದಿದೆ. ಎನ್ ಡಿಆರ್ ಎಫ್ ತಂಡದ ಸಿಬ್ಬಂದಿಗಳು ಕಾರ್ಯಾಚರಣೆ ಮುಂದುವರೆಸಿದ್ದು ಎನ್ ಡಿಆರ್ ಎಫ್ ಇನ್ಸ್ ಪೆಕ್ಟರ್ ಕೇಶವ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಅವಗಢದಲ್ಲಿ ಪಾರಾಗಿದ್ದ ಮಾಸ್ತಿಗುಡಿ ಚಿತ್ರದ ನಾಯಕ ನಟ ದುನಿಯಾ ವಿಜಯ್ ಎನ್ ಡಿ ಆರ್ ಎಫ್ ತಂಡದೊಂದಿಗೆ ಸ್ಥಳದಲ್ಲೇ ಇದ್ದಾರೆ.

ಎಫ್‍ಐಆರ್ ದಾಖಲು  : 

ಮಾಸ್ತಿ ಗುಡಿ ದುರಂತ ಪ್ರಕರಣ ಸಂಬಂಧ ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಚಿತ್ರತಂಡದ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‍ಐಆರ್) ದಾಖಲಾಗಿದೆ.
ಐಪಿಸಿ ಸೆಕ್ಷನ್ 304ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ನಟ ದುನಿಯಾ ವಿಜಯ್ , ನಿರ್ಮಾಣದ ಹೊಣೆ ಹೊತ್ತಿರುವ ಕೆಪಿಎನ್ ಕಂಬೈನ್ಸ್, ನಿರ್ದೇಶಕ ನಾಗಶೇಖರ್,, ಸಾಹಸ ನಿರ್ದೇಶಕ ರವಿವರ್ಮಾ ಹ್ಯಾಲಿಕಾಪ್ಟರ್ ಮಾಲೀಕ ಹಾಗೂ ಪೈಲೆಟ್ ಸೇರಿದಂತೆ ಹಲವರ ಮೇಲೆ ಪ್ರಕರಣ ದಾಖಲಾಗಿದೆ. ಸೆಕ್ಷನ್ 304ರ ಪ್ರಕಾರ ಸಾವು ಸಂಭವಿಸುತ್ತದೆ ಎಂದು ಗೊತ್ತಿದ್ದರೂ ಸಾವಿಗೆ ಕಾರಣವಾದ ಆರೋಪದಡಿ ಪ್ರಕರಣ ದಾಖಲಾಗಿದೆ. ಈ ಸೆಕ್ಷನ್ ಅಡಿ ಆರೋಪ ಸಾಬೀತಾದ್ರೆ 10 ವರ್ಷಗಳ ಶಿಕ್ಷೆ ವಿಧಿಸಲಾಗುತ್ತದೆ. ಜಲಮಂಡಳಿ ಅಧೀಕ್ಷಕರು ನೀಡಿದ ದೂರಿನನ್ವಯ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ಮುಂದುವರೆದ ಶೋಧ

ಮಾಸ್ತಿಗುಡಿ ಚಿತ್ರೀಕರಣದ ವೇಳೆ ಸಾವನ್ನಪ್ಪಿದ ಖಳನಟರಾದ ಅನಿಲ್ ಹಾಗೂ ಉದಯ್ ಮೃತದೇಹಕ್ಕಾಗಿ ಇಂದು ಬೆಳಗ್ಗೆಯಿಂದ ಮತ್ತೆ ಶೋಧ ಕಾರ್ಯ ಆರಂಭವಾಗಿದೆ. ಸೋಮವಾರ ರಾತ್ರಿ 12 ಗಂಟೆ ವೇಳೆಗೆ ಕಾರ್ಯಾಚರಣೆ ನಿಲ್ಲಿಸಲಾಗಿತ್ತು. 8 ಗಂಟೆ ನಂತರ ಮತ್ತೆ ಶೋಧ ಕಾರ್ಯ ಆರಂಭವಾಗಿದೆ.ಘಟನಾ ಸ್ಥಳಕ್ಕೆ ಎನ್ ಡಿಆರ್ ಎಫ್ ತಂಡದ ಸಿಬ್ಬಂದಿಗಳು ಆಗಮಿಸಿದ್ದು, ನಟರ ಮೃತದೇಹಗಳಿಗಾಗಿ ಎರಡನೆ ದಿನ ತಿಪ್ಪಗೊಂಡನ ಹಳ್ಳಿ ಡ್ಯಾಂ ಬಳಿ ಶೋಧಕಾರ್ಯಾಚರಣೆ ಮುಂದುವರೆದಿದೆ.  ಎನ್‍ಡಿಆರ್‍ಎಫ್ ಇನ್ಸ್‍ಪೆಕ್ಟರ್ ಕೇಶವ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಅವಘಢದಲ್ಲಿ ಪಾರಾಗಿದ್ದ ಮಾಸ್ತಿಗುಡಿ ಚಿತ್ರದ ನಾಯಕ ನಟ ದುನಿಯಾ ವಿಜಯ್ ಎನ್‍ಡಿಆರ್‍ಎಫ್ ತಂಡದೊಂದಿಗೆ ಸ್ಥಳದಲ್ಲೇ ಇದ್ದಾರೆ.

ಚಿತ್ರತಂಡದ ವಿರುದ್ಧ ದೂರು ದಾಖಲು:

ಇನ್ನು ನಿಯಮಗಳನ್ನು ಉಲ್ಲಂಘಿಸಿ, ಯಾವುದೇ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳದೇ ಬೇಜವಾಬ್ದಾರಿತನದಿಂದ ಚಿತ್ರೀಕರಣ ನಡೆಸಿದ್ದ ಚಿತ್ರತಂಡದ ವಿರುದ್ಧ ದೂರು ದಾಖಲಾಗಿದೆ. ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಮಾಸ್ತಿಗುಡಿ ಚಿತ್ರತಂಡದ ವಿರುದ್ಧ ದೂರು ದಾಖಲಾಗಿದ್ದು, ನಿರ್ದೇಶಕ ನಾಗಶೇರ್ಖ, ಸಾಹಸ ನಿರ್ದೇಶಕ ರವಿವರ್ಮಾ, ನಿರ್ಮಾಪಕ ಸುಂದರ್, ಚಿತ್ರತಂಡದ ಯುನಿಟ್ ಮ್ಯಾನೇಜರ್ ಭರತ್ ವಿರುದ್ಧ ಸೆಕ್ಷನ್ 304, 188 ಸಹ ಕಲಂ 34 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಾಸ್ತಿಗುಡಿ ಚಿತ್ರತಂಡ ತಿಪ್ಪಗೊಂಡನ ಹಳ್ಳಿ ಜಲಾಶಯದ ಬಳಿ ನಿಷೇಧಿತ ಪ್ರದೇಶದಲ್ಲಿ ಚಿತ್ರೀಕರಣ ನಡೆಸಿದ್ದೂ ಅಲ್ಲದೇ, ಹೆಲಿಕಾಪ್ಟರನ್ನು ಬಳಸಿ ಚಿತ್ರೀಕರಣ ಮಾಡುವಂತಿಲ್ಲ ಎಂಬ ನಿಯಮಗಳನ್ನು ಉಲ್ಲಂಘಿಸಿ ಚಿತ್ರೀಕರಣ ನಡೆಸಿದ್ದರು. ಖಳನಟರು ಹೆಲಿಕಾಪ್ಟರ್‍ನಿಂದ ನೀರಿಗೆ ಜಿಗಿಯುವ ಸಾಹಸ ದೃಶ್ಯ ಚಿತ್ರೀಕರಣದ ವೇಳೆ ಅನಿಲ್ ಹಾಗೂ ಉದಯ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin