ಚಾಮುಂಡಿ ತಪ್ಪಲಿನ ಗೌರಿಶಂಕರ ನಗರಕ್ಕೆ ಚಿರತೆ ದಾಳಿ: ಹಸು ಬಲಿ ,ಜನರು ಆತಂಕ

ಈ ಸುದ್ದಿಯನ್ನು ಶೇರ್ ಮಾಡಿ

chirate

ಮೈಸೂರು,ನ.13- ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಗೌರಿಶಂಕರನಗರದಲ್ಲಿ ರಾತ್ರಿ ಚಿರತೆಯೊಂದು ಹಸುವಿನ ಮೇಲೆ ದಾಳಿ ಮಾಡಿ ತಿಂದುಹಾಕಿರುವ ಘಟನೆ ನಡೆದಿದೆ. ಗೌರಿಶಂಕರನಗರದಲ್ಲಿ ಚಿರತೆ ಕಾಣಿಸಿಕೊಂಡಿರುವುದರಿಂದ ಇಲ್ಲಿನ ನಿವಾಸಿಗಳು ಭಯಭೀತರಾಗಿದ್ದು, ಹಗಲಿನಲ್ಲೇ ಓಡಾಡಲು ಹಿಂಜರಿಯುತ್ತಿದ್ದಾರೆ. ಈ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಚಿರತೆ ಹಿಡಿಯಲು ಕ್ರಮ ಕೈಗೊಳ್ಳುವುದಾಗಿ ಅರಣ್ಯ ಇಲಾಖೆ ಅಧಿಕಾರಿ ಕರಿಕಾಳನ್ ಭರವಸೆ ನೀಡಿದ್ದಾರೆ.

 

► Follow us on –  Facebook / Twitter  / Google+

 

Facebook Comments

Sri Raghav

Admin