ಸಿಎಂ ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧ : ಸಚಿವ ತನ್ವೀರ್ ಸೇಠ್

ಈ ಸುದ್ದಿಯನ್ನು ಶೇರ್ ಮಾಡಿ

cm

ಬೆಂಗಳೂರು, ನ.13- ನಗ್ನಚಿತ್ರ ವೀಕ್ಷಣೆ ಕುರಿತಂತೆ ಸಿಎಂಗೆ ಸಂಪೂರ್ಣ ಮಾಹಿತಿ ನೀಡಿದ್ದೇನೆ. ಅವರು ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಇಂದಿಲ್ಲಿ ಸ್ಪಷ್ಟಪಡಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಬೆಳಗ್ಗೆ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಈ ವಿಷಯ ತಿಳಿಸಿದರು.ಎಡಿಟ್ ಆಗದ ವೀಡಿಯೋ ಪಡೆದುಕೊಳ್ಳುವ ಸಲುವಾಗಿ ಪೊಲೀಸರಿಗೆ ದೂರು ನೀಡಿದ್ದೇನೆ ಹೊರತು ಮಾಧ್ಯಮಗಳ ವಿರುದ್ಧ ದ್ವೇಷದಿಂದಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ವಿವರಣೆ ನೀಡಿದರು.

ನಾನು ಯಾವುದೇ ಜನ ದ್ರೋಹದಂತಹ ಕೆಲಸ ಮಾಡಿಲ್ಲ. ಮೊಬೈಲ್‍ನಲ್ಲಿ ಬಂದ ಫೋಟೋಗಳನ್ನು ಪರಿಶೀಲಿಸುತ್ತಿದ್ದೆ. ಅಶ್ಲೀಲ ದೃಶ್ಯಗಳು ಇರುವುದನ್ನು ಕಂಡು ಅವುಗಳನ್ನು ಬದಲಿಸಿ ಬೇರೆ ಸಂದೇಶಗಳ ಕಡೆ ಗಮನ ಹರಿಸಿದೆ. ಟಿವಿಗಳಲ್ಲಿ ಪೂರ್ತಿ ವಿಡಿಯೋ ಪ್ರಸಾರ ಮಾಡಿಲ್ಲ. ನಾನು ಮೊಬೈಲ್‍ನಲ್ಲಿ ಬಂದ ಯಾವುದೇ ಅಶ್ಲೀಲ, ವಿಡಿಯೋವನ್ನು ಡೌನ್‍ಲೋಡ್‍ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಸಚಿವ ಸ್ಥಾನಕ್ಕೆ ರಾಜೀನಾಮೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುಖ್ಯಮಂತ್ರಿಗೆ ಎಲ್ಲವನ್ನೂ ವಿವರಿಸಿದ್ದೇನೆ. ಪೆÇಲೀಸ್ ಠಾಣೆಯಿಂದಲೂ ಅವರು ಮಾಹಿತಿ ಪಡೆದುಕೊಂಡಿದ್ದಾರೆ. ಅವರು ತೆಗೆದುಕೊಳ್ಳುವ ನಿರ್ಧಾರವನ್ನು ಪಾಲಿಸುತ್ತೇನೆ ಎಂದು ಹೇಳಿದರು.ತನ್ವೀರ್ ಸೇಠ್ ನಿಷ್ಠಾವಂತ ಕಾರ್ಯಕರ್ತ. ಅವರು ಪಕ್ಷಕ್ಕೆ ಧಕ್ಕೆಯಾಗುವಂತಹ ಯಾವುದೇ ತಪ್ಪು ಮಾಡಿಲ್ಲ. ಯಾರೋ ಕಳುಹಿಸಿದ ಸಂದೇಶಗಳನ್ನು ನೋಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿಗಳಿಗೆ ವಿವರಣೆ ನೀಡಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಸಮಜಾಯಿಷಿ ನೀಡಿದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಬಿಜೆಪಿ ಮತ್ತು ಜೆಡಿಎಸ್‍ನವರು ಪ್ರತಿಭಟನೆ ಮಾಡುತ್ತಿರುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಲೇವಡಿ ಮಾಡಿದರು.

 

► Follow us on –  Facebook / Twitter  / Google+

Facebook Comments

Sri Raghav

Admin