ಕೇಂದ್ರ ಸರ್ಕಾರ ಸಹಕಾರ ನೀಡಿದರೆ ರೈತರ ಸಾಲ ಮನ್ನಾ ಮಾಡಲು ನಾವು ಸಿದ್ದ :ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

cmk-at-tumkur
ತುಮಕೂರು, ನ.15- ರಾಷ್ಟ್ರೀಕೃತ ಬ್ಯಾಂಕ್‍ಗಳೂ ಸೇರಿದಂತೆ ಇತರೆ ಎಲ್ಲಾ ಬ್ಯಾಂಕ್‍ಗಳಿಂದ ರೈತರು ಪಡೆದಿರುವ ಸಾಲ ಮನ್ನಾ ಮಾಡಲು ಸರ್ಕಾರಕ್ಕೆ ಹೆಚ್ಚಿನ ಹಣದ ಅಗತ್ಯತೆ ಎದುರಾಗುತ್ತದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅರ್ಧ ಹಣವನ್ನು ನೀಡಿದರೆ ಅವರ ಎಲ್ಲಾ ಸಾಲ ಮನ್ನಾ ಮಾಡಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬರವೀಕ್ಷಣೆಗೆ ಬಂದಿದ್ದ ಮುಖ್ಯ ಮಂತ್ರಿಯವರು ಚಿಕ್ಕನಾಯಕನಹಳ್ಳಿಯ ಜೂನಿಯರ್ ಸರ್ಕಾರಿ ಕಾಲೇಜು ಮಿನಿ ಕ್ರೀಡಾಂಗಣ ದಲ್ಲಿ ಪೊಲೀಸರಿಂದ ಗೌರವ ರಕ್ಷೆ ಸ್ವೀಕರಿಸಿದ  ನಂತರ ಸುದ್ದಿಗಾರರ ಜತೆ ಮಾತನಾಡಿ ದರು.ರೈತರ ಸಂಕಷ್ಟ ಅರಿತಿದ್ದೇನೆ.
ಅವರ ಸಾಲ ಮನ್ನಾ ಮಾಡಲು ನಾನು ಉತ್ಸುಕನಾಗಿದ್ದೇನೆ. ಆರ್ಥಿಕ ಹೊರೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೆರವಿಗೆ ಬಂದರೆ ಒಳಿತಾಗಲಿದೆ ಎಂದು ಹೇಳಿದರು. ರಾಜ್ಯದಲ್ಲಿ ಭೀಕರ ಬರಗಾಲ ಬಂದೊದಗಿದೆ. ಇದನ್ನು ಎದುರಿಸಲು ಸರ್ಕಾರ ಸನ್ನದ್ಧವಾಗಿದೆ. ಇತ್ತೀಚೆಗಷ್ಟೆ ಕೇಂದ್ರದ ಬರ ಅಧ್ಯಯನ ತಂಡ ಪರಿಶೀಲಿಸಿ ಹೋಗಿದೆ. 5 ಸಾವಿರ ಕೋಟಿ ಹಣ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಬರ ನಿರ್ವಹಣೆಗೆ ಎನ್‍ಡಿಆರ್‍ಎಫ್ ಯೋಜನೆಯಡಿ ಹಣ ನೀಡಲೇಬೇಕಿದೆ ಎಂದು ಹೇಳಿದರು. 400ಕ್ಕೂ ಹೆಚ್ಚು ರೈತರು ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರು ಯಾವುದೇ ಕಾರಣಕ್ಕೂ ಧೃತಿಗೆಡಬಾರದು. ರೈತರೊಂದಿಗೆ ನಾವಿದ್ದೇವೆ ಎಂದು ಅಭಯ ನೀಡಿದರು.

 
ರಾಜ್ಯ ಪೊಲೀಸರ ವೇತನ ಪರಿಷ್ಕರಣೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಈಗಾಗಲೇ ಔರಾದ್ಕರ್ ಅವರಿಗೆ ವರದಿ ನೀಡಲು ಸೂಚಿಸಿದ್ದೇನೆ. ಪೆÇಲೀಸರ ವೇತನ ಹೆಚ್ಚಳ ಮಾಡಲು ನಾವು ಬದ್ಧರಾಗಿದ್ದೇವೆ. ವರದಿಗಾಗಿ ಕಾಯುತ್ತಿದ್ದೇನೆ. ಆರ್ಥಿಕ ಇಲಾಖೆ ತಡೆಯೊಡ್ಡಿದೆ ಎಂಬುದು ಸುಳ್ಳು. ವೇತನವನ್ನು ಹೆಚ್ಚಳ ಮಾಡಿಯೇ ಮಾಡುತ್ತೇನೆ.ಪೊಲೀಸರು ನಿರಾಶರಾಗುವುದು ಬೇಡ ಎಂದು ತಿಳಿಸಿದರು.

 
ನೋಟು ಅಪಮೌ ಲ್ಯ: 500 ಮತ್ತು 1000 ರೂ. ಮುಖಬೆಲೆಯ ನೋಟು ರದ್ಧತಿಯಿಂದ ಜನ ಸಾಮಾನ್ಯರು, ಕೂಲಿಕಾರ್ಮಿಕರು, ರೈತರು, ಕಡುಬಡವರಿಗೆ ತೀವ್ರ ತೊಂದರೆಯಾಗಿದೆ.  2000 ರೂ. ಮುಖಬೆಲೆಯ ನೋಟನ್ನು ಬಿಡುವುದರ ಬದಲು 500, 100ರೂ. ನೋಟುಗಳನ್ನು ಹೆಚ್ಚಾಗಿ ಬಿಡುಗಡೆ ಮಾಡಿದ್ದರೆ ಇಷ್ಟೊಂದು ಸಮಸ್ಯೆ ಎದುರಾಗುತ್ತಿರಲಿಲ್ಲ. ಇದನ್ನು ಕೂಡಲೇ ಸರಿಪಡಿಸುವಂತೆ ಮನವಿ ಮಾಡಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಿನ್ನೆಯಷ್ಟೆ ಬ್ಯಾಂಕ್‍ನ ಅಧಿಕಾರಿಗಳು, ಇತರೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜನ ಸಾಮಾನ್ಯರಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು. ಸಚಿವ ತನ್ವೀರ್‍ಸೇಠ್ ಮೊಬೈಲ್‍ನಲ್ಲಿ ಅಶ್ಲೀಲ ಚಿತ್ರ ನೋಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಬಿಜೆಪಿಯವರು ಸದನದಲ್ಲಿ ಗಹನವಾದ ಚರ್ಚೆ ನಡೆಯುತ್ತಿದ್ದಾಗ ಅಶ್ಲೀಲ ಚಿತ್ರ ವೀಕ್ಷಿಸಿದ್ದರು. ಅದಕ್ಕೂ ತನ್ವೀರ್‍ಸೇಠ್ ಪ್ರಕರಣಕ್ಕೂ ತಳುಕು ಹಾಕುವುದು ಬೇಡ ಎಂದರು.

 

ಈ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಿದ್ದೇನೆ. ನಾನು ಮೃದು ಧೋರಣೆ ತೋರಿಲ್ಲ ವರದಿ ಬಂದ ನಂತರ ಕ್ರಮಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು. ಚಿಕ್ಕನಾಯಕನಹಳ್ಳಿಯ ನವಿಲುಕೆರೆಗೆ ಭೇಟಿ ನೀಡಿ ಸಿದ್ದರಾಮಯ್ಯ ಪರಿಶೀಲಿಸಿ ನಂತರ ಕುಪ್ಪೂರು ಗದ್ದಿಗೆ ಮಠಕ್ಕೆ ಭೇಟಿ ನೀಡಿ ಶ್ರೀ ಯತೀಂದ್ರ ಶಿವಾಚಾರ್ಯ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದು ಬರಪೀಡಿತ ಪ್ರದೇಶಗಳಿಗೆ ತೆರಳಿದರು.
ಸಚಿವ ಎಚ್.ಸಿ.ಮಹದೇವಪ್ಪ ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ, ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್‍ಬಾಬು, ತಿಪಟೂರು ಶಾಸಕ ಷಡಕ್ಷರಿ, ಸಂಸದ ಮುದ್ದಹನುಮೇಗೌಡ, ಜಿಲ್ಲಾಧಿಕಾರಿ ಮೋಹನ್‍ರಾಜ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಾಲಿನಿ ರಜನೀಶ್, ಕೇಂದ್ರೀಯ ವಲಯದ ಐಜಿಪಿ ಸೀಮಂತ್‍ಕುಮಾರ್‍ಸಿಂಗ್ ಮತ್ತಿತರರ ಅಧಿಕಾರಿಗಳು ಹಾಜರಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin