ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ರಾಮಲಿಂಗಾರೆಡ್ಡಿ ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

 

ramalinga-reddy

ಚಿಕ್ಕಬಳ್ಳಾಪುರ, ನ.17-ಮರಳು ದಂಧೆ ನಡೆಸುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ದಂಧೆಗೆ ಕಡಿವಾಣ ಹಾಕಬೇಕೆಂದು ಜಿಲ್ಲಾಧಿಕಾರಿಗಳಿಗೆ ರಾಜ್ಯದ ಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದರು.ಜಿಪಂ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಗೆ ಕಟ್ಟುನಿಟ್ಟಾಗಿ ಕಡಿವಾಣ ಹಾಕಲೇಬೇಕು. ಇತ್ತೀಚೆಗೆ ಮರಳು ದಂಧೆ ಕುರಿತು ಹೆಚ್ಚು ದೂರು ಬರುತ್ತಿವೆ. ಹಾಗಾಗಿ ಇನ್ನು ಮುಂದೆ ಯಾವುದೇ ಕಾರಣಕ್ಕೂ ಅಕ್ರಮ ಮರಳು ದಂಧೆಗೆ ಅವಕಾಶ ನೀಡದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ತಹಸೀಲ್ದಾರ್, ಕಂದಾಯ ಅಧಿಕಾರಿಗಳು ಹಾಗೂ ಗ್ರಾಪಂ ಪಿಡಿಒಗಳು ಕಾರ್ಯಾಚರಣೆ ನಡೆಸಿ ತಡೆಗಟ್ಟಬೇಕು ಎಂದು ಸೂಚಿಸಿದರು.
ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಕ್ರಮ ಮಧ್ಯ ಮಾರಾಟ ಕುರಿತು ಸಾಕಷ್ಟು ದೂರುಗಳು ಬರುತ್ತಿವೆ. ಇದನ್ನು ನಿಯಂತ್ರಿಸುವಂತೆ ಅಬಕಾರಿ ಅಧಿಕಾರಿಗಳಿಗೆ ಆದೇಶಿಸಿದರು. ಕುಡಿಯುವ ನೀರಿನ ವಿಚಾರದಲ್ಲಿ ಯಾವುದೇ ದೂರುಗಳು ಬಂದಾಗ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಹೇಳಿದರು.ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳನ್ನು ವಿಶೇಷವಾಗಿ ಪರಿಗಣಿಸಿ ವಿದ್ಯುತ್ ಪೂರೈಕೆಯನ್ನು 7 ರಿಂದ 8 ಗಂಟೆಯವರೆಗೆ ವಿಸ್ತರಿಸುವಂತೆ ಶಾಸಕ ಡಾ.ಕೆ.ಸುಧಾಕರ್ ಸಚಿವರಲ್ಲಿ ಮನವಿ ಮಾಡಿದರು.ಶಾಸಕರಾದ ಎಸ್.ಎನ್.ಸುಬ್ಬಾರೆಡ್ಡಿ, ಎಂ.ಕೃಷ್ಣಾರೆಡ್ಡಿ, ಡಾ.ಕೆ.ಸುಧಾಕರ್, ಜಿಪಂ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ, ಉಪಾಧ್ಯಕ್ಷೆ ಪಿ.ನಿರ್ಮಲ, ಜಿಲ್ಲಾಧಿಕಾರಿ ದೀಪ್ತಿ ಆದಿತ್ಯ ಕಾನಡೆ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೆ. ಮಂಜುನಾಥ್ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin