ನಿವೃತ್ತ ಸರ್ಕಾರಿ ನೌಕರರಿಗೆ ವೈದ್ಯಕೀಯ ವೆಚ್ಚ ಒದಗಿಸುವಂತೆ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

retired-employees
ಬೆಂಗಳೂರು, ನ.18- ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗೆ ಅಗತ್ಯತೆಯ ವೈದ್ಯಕೀಯ ವೆಚ್ಚ ಒದಗಿಸುವಲ್ಲಿ ಸರ್ಕಾರ ಸೂಕ್ತ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕೆಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಮನವಿ ಮಾಡಿದೆ. ನಿವೃತ್ತ ಸರ್ಕಾರಿ ನೌಕರರು ವೈದ್ಯಕೀಯ ಸೌಲಭ್ಯಕ್ಕಾಗಿ ಭವಣೆ ಪಡುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಅವರು ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಸಂಘದ ಮಾಜಿ ಗೌರವಾಧ್ಯಕ್ಷ ಎಂ.ವಿ.ರಾಜಶೇಖರಯ್ಯ ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರಿ ನೌಕರರು ವಯೋಮಿತಿಯಂತೆ 60 ವರ್ಷಕ್ಕೆ ನಿವೃತ್ತಿ ಹೊಂದುತ್ತಾರೆ. ಈ ಸಂದರ್ಭದಲ್ಲೇ ಸರ್ವೆ ಸಾಮಾನ್ಯವಾಗಿ ರಕ್ತದೊತ್ತಡ, ಸಕ್ಕರೆ ಕಾಯಿಲೆ ಸೇರಿದಂತೆ ಅನೇಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ.

ಸಹಜವಾಗಿಯೇ ನಿವೃತ್ತಿಯ ನಂತರ ದೊರೆಯಬಹುದಾದ ಆರ್ಥಿಕ ಸೌಲಭ್ಯಗಳಿಂದ ಸಂಸಾರಿಕ ಖರ್ಚು-ವೆಚ್ಚಗಳನ್ನು ಇತ್ತೀಚಿನ ಬೆಲೆ ಏರಿಕೆಯಿಂದ ಭರಿಸಲು ಸಾಧ್ಯವಾಗುತ್ತಿಲ್ಲ. ಅಲ್ಲದೆ, ಔಷ ಖರೀದಿಸಲು ಆರ್ಥಿಕವಾಗಿ ಅನೇಕ ನಿವೃತ್ತ ಕುಟಂಬಗಳು ಸಂಕಷ್ಟದಲ್ಲಿದ್ದಾರೆಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ಪ್ರಸ್ತುತ ಕೆಲಸ ಮಾಡುತ್ತಿರುವ ಸರ್ಕಾರಿ ನೌಕರರಿಗೆ ಜ್ಯೋತಿ ಸಂಜೀವಿನಿ ಎಂಬ ವಿನೂತನ ಯೋಜನೆಯನ್ನು ನೌಕರರ ವೈದ್ಯಕೀಯ ವೆಚ್ಚ ಭರಿಸಲು ಸರ್ಕಾರ ಮಂಜೂರು ಮಾಡಿರುವುದು ಸಂತೋಷದ ವಿಷಯ. ಈ ನಿಟ್ಟಿನಲ್ಲಿ ನಿವೃತ್ತ ಸರ್ಕಾರಿ ನೌಕರರಿಗೂ ವೈದ್ಯಕೀಯ ಸೌಲಭ್ಯ ನೀಡಲು ಸೂಕ್ತ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕಾಗಿ ಅವರು ಮನವಿ ಮಾಡಿದ್ದಾರೆ. ಬೇಡಿಕೆ ಈಡೇರಿಸಲು ವಿಳಂಬ ಮಾಡಿದ್ದಲ್ಲಿ 2017ರ ಜನವರಿಯಲ್ಲಿ ಆಯಾ ತಾಲ್ಲೂಕು ಮತ್ತು ಜಿಲ್ಲಾಕಾರಿಗಳ ಕಚೇರಿ ಮುಂದೆ ಬೇಡಿಕೆ ಈಡೇರುವವರೆಗೂ ಧರಣಿ ಸತ್ಯಾಗ್ರಹ ಮಾಡುವುದಾಗಿ ಅವರು ತಿಳಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin