ಪ್ರಧಾನಿ ಮೋದಿ ನೋಟ್ ಬ್ಯಾನ್ ನಿರ್ಧಾರವನ್ನು ಸ್ವಾಗತಿಸಿದ ಅಣ್ಣಾ ಹಜಾರೆ

ಈ ಸುದ್ದಿಯನ್ನು ಶೇರ್ ಮಾಡಿ

Anna-Hazare

ಮುಂಬೈ. ನ.19 : 500 ಹಾಗೂ 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ ಮೋದಿ ನಿರ್ಧಾರವನ್ನು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಸ್ವಾಗತಿಸಿದ್ದು. ಈ ನಿರ್ಧಾರದಿಂದ ಸದ್ಯದಲ್ಲಿ ತೊಂದರೆಯಾದರೂ ಭವಿಷ್ಯದಲ್ಲಿ ಲಾಭವಿದೆ ಎಂದು ಹೇಳಿದ್ದಾರೆ. ನವೆಂಬರ್ 8ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಡೀ ವಿಶ್ವವೇ ಚಕಿತಗೊಳ್ಳುವಂತಹ ಘೋಷಣೆ ಮಾಡಿದ್ದಾರೆ. ಈ ನಿರ್ಧಾರದಿಂದ ಜನರೂ ಸಹ ಸಂತಸ ವ್ಯಕ್ತಪಡಿಸಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಸದಾ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಮೋದಿ ಸರ್ಕಾರದ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದು ದೊಡ್ಡ ಹಾಗೂ ಕ್ರಾಂತಿಕಾರಿ ನಿರ್ಧಾರ ಎಂದಿದ್ದಾರೆ. 500 ಹಾಗೂ 1000 ರೂಪಾಯಿ ನೋಟುಗಳ ನಿಷೇಧದಿಂದಾಗಿ ದೇಶದಲ್ಲಿರುವ ಕಪ್ಪುಹಣದ ಮೇಲೆ ನಿಯಂತ್ರಣ ಬೀಳಲಿದೆ. ಕಪ್ಪುಹಣ, ಭ್ರಷ್ಟಾಚಾರ ಹಾಗೂ ಭಯೋತ್ಪಾದನೆಯ ಫಂಡ್ ಮೇಲೆ ಪ್ರಭಾವ ಬೀರಲಿದೆ.

ಹಿಂದಿನ ಸರ್ಕಾರ ಕಪ್ಪು ಹಣ ನಿಗ್ರಹಕ್ಕೆ ವಿಶೇಷ ಆಸಕ್ತಿ ತೋರಿರಲಿಲ್ಲ. ಆದ್ರೆ ಈಗಿನ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಇದರಿಂದಾಗಿ ಪ್ರಜಾಪ್ರಭುತ್ವ ಬಲಗೊಳ್ಳಲಿದೆ ಎಂದು ಅಣ್ಣಾ ಹಜಾರೆ ತಿಳಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin