ಇಂದೋರ್-ಪಾಟ್ನಾ ರೈಲು ದುರಂತದಲ್ಲಿ ಮಡಿದವರಿಗೆ ವಿಧಾನಸಭೆಯಲ್ಲಿ ಶ್ರದ್ಧಾಂಜಲಿ

ಈ ಸುದ್ದಿಯನ್ನು ಶೇರ್ ಮಾಡಿ
ಇಂದೋರ್-ಪಾಟ್ನಾ ರೈಲು ದುರಂತದಲ್ಲಿ ಮಡಿದವರಿಗೆ ವಿಧಾನಸಭೆಯಲ್ಲಿ ಶ್ರದ್ಧಾಂಜಲಿ
ಇಂದೋರ್-ಪಾಟ್ನಾ ರೈಲು ದುರಂತದಲ್ಲಿ ಮಡಿದವರಿಗೆ ವಿಧಾನಸಭೆಯಲ್ಲಿ ಶ್ರದ್ಧಾಂಜಲಿ

ಬೆಳಗಾವಿ(ಸುವರ್ಣ ವಿಧಾನಸೌಧ), ನ.21- ಇತ್ತೀಚೆಗೆ ನಿಧನರಾದ ಮಾಜಿ ಸಚಿವ ಜಿ.ಬಸವಣ್ಯಪ್ಪ, ಮಾಜಿ ಶಾಸಕ ಎಸ್.ಕೆ.ದಾಸಪ್ಪ, ಹಿರಿಯ ಪತ್ರಕರ್ತ ಗಿರೀಶ್‍ನಿಕ್ಕಂ ಹಾಗೂ ಇಂದೋರ್-ಪಾಟ್ನಾ ಎಕ್ಸ್‍ಪ್ರೆಸ್ ರೈಲು ದುರಂತದಲ್ಲಿ ಮಡಿದ ಪ್ರಯಾಣಿಕರಿಗೆ ವಿಧಾನಸಭೆಯಲ್ಲಿಂದು ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ವಿಧಾನಸಭಾ ಅಧ್ಯಕ್ಷ ಕೆ.ಬಿ.ಕೋಳಿವಾಡ ಅವರು, ಸಂತಾಪ ಸೂಚಕ ನಿರ್ಣಯ ಮಂಡಿಸಿ, ಮಾಜಿ ಸಚಿವ ಜಿ.ಬಸವಣ್ಯಪ್ಪ ಅವರು ಒಟ್ಟು ಆರು ಬಾರಿ ವಿಧಾನಸಭೆಗೆ ಚುನಾಯಿತರಾಗಿದ್ದರು. ಸಮಜವಾದಿಗಳಾಗಿದ್ದ ಅವರು, ಸಚಿವರಾಗಿ ಸೇವೆ ಸಲ್ಲಿಸಿದ್ದ ಅವರ ನಿಧನದಿಂದ ಸರಳ, ಸಜ್ಜನ ಹಿರಿಯ ರಾಜಕಾರಣಿಯನ್ನು ನಾಡು ಕಳೆದುಕೊಂಡಂತಾಗಿದೆ ಎಂದು ವಿಷಾದಿಸಿದರು. ಎಸ್.ಕೆ.ದಾಸಪ್ಪ ಅವರು 9ನೇ ವಿಧಾನಸಭೆಗೆ ಶಿರಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಸಹಕಾರಿ ಧುರೀಣರಾಗಿದ್ದ ದಾಸಪ್ಪ ಅವರ ನಿಧನದಿಂದ ರಾಜ್ಯಕ್ಕೆ ತುಂಬ ನಷ್ಟವಾಗಿದೆ ಎಂದರು. [ ಇದನ್ನೂ ಓದಿ :   ಚಳಿಗಾಲದ ಅಧಿವೇಶನ – ಸುವರ್ಣ ಸೌಧ, ಬೆಳಗಾವಿ (Live Updates)   ]

ಹಿರಿಯ ಪತ್ರಕರ್ತ ಗಿರೀಶ್‍ನಿಕ್ಕಂ ಹಲವು ದಿನಪತ್ರಿಕೆಗಳಲ್ಲಿ ಕೆಲಸ ಮಾಡಿದ್ದ ಅವರು ರಾಜ್ಯಸಭಾ ಟಿವಿ ನಿರೂಪಕರಾಗಿ ಸೇವೆಸಲ್ಲಿಸಿದ್ದರು. ಇವರ ನಿಧನದಿಂದ ರಾಜ್ಯವು ಹಿರಿಯ ಪತ್ರಕರ್ತರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ವಿಷಾದಿಸಿದರು. ಇಂದೋರ್-ಪಾಟ್ನಾ ಎಕ್ಸ್‍ಪ್ರೆಸ್ ರೈಲು ದುರಂತದಲ್ಲಿ 120ಕ್ಕೂ ಹೆಚ್ಚು ಮೆಂದಿ ಮೃತಪಟ್ಟಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವಿಷಾದಿಸಿದರು. ಸಭಾಧ್ಯಕ್ಷರು ಮಂಡಿಸಿದ ಸಂತಾಪ ಸೂಚಕ ನಿರ್ಣಯವನ್ನು ಬೆಂಬಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರೋಧಪಕ್ಷದ ನಾಯಕ ಜಗದೀಶ್‍ಶೆಟ್ಟರ್, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ವೈ.ಎಸ್.ವಿ.ದತ್ತ ಅವರು ಮೃತರ ಗುಣಗಾನ ಮಾಡಿದರು. ನಂತರ ಮೃತರ ಗೌರವಾರ್ಥ ಸದನದಲ್ಲಿ ಸದಸ್ಯರೆಲ್ಲರೂ ಎದ್ದು ನಿಂತು ಒಂದು ನಿಮಿಷ ಮೌನ ಆಚರಿಸಿದರು. ಬಳಿಕ ಸಭಾಧ್ಯಕ್ಷರು ಸದನದ ಕಾರ್ಯಕಲಾಪಗಳನ್ನು ಕೆಲ ಕಾಲ ಮುಂದೂಡಿದರು.

► Follow us on –  Facebook / Twitter  / Google+

Facebook Comments

Sri Raghav

Admin