ರೋಬೋ ‘2.0’ ಫಸ್ಟ್ ಲುಕ್ ಔಟ್

ಈ ಸುದ್ದಿಯನ್ನು ಶೇರ್ ಮಾಡಿ

Robo-20.0

ಮುಂಬೈ ನ.21 : ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿರುವ ‘2.0’ ಫಸ್ಟ್ ಲುಕ್ ಟೀಸರ್
ಮುಂಬೈನ ಯಶ್ ರಾಜ್ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಿದೆ. ಸುಮಾರು 360 ಕೋಟಿ ರೂ. ವೆಚ್ಛದಲ್ಲಿ ತಮಿಳು, ಹಿಂದಿ, ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ‘2.0’ ಚಿತ್ರಕ್ಕೆ ಎ.ಆರ್. ರೆಹಮಾನ್ ಸಂಗೀತ ನೀಡಿದ್ದಾರೆ. ರಜನಿಕಾಂತ್ ಅಭಿನಯದ ‘ರೋಬೋ’ ಚಿತ್ರದ ಮುಂದುವರೆದ ಭಾಗ ಇದಾಗಿದ್ದು, ಆರಂಭದಿಂದಲೂ ಭಾರೀ ನಿರೀಕ್ಷೆ ಮೂಡಿಸಿದೆ.

https://www.youtube.com/watch?v=mUhEHp-JTuA

ಕಾರ್ಯಕ್ರಮದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಸೇರಿದಂತೆ ಅನೇಕ ಕಲಾವಿದರು ಭಾಗವಹಿಸಿದ್ದು. ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ಕರಣ್ ಜೋಹರ್ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ನಿರ್ದೇಶಕ ಶಂಕರ್, ನಟಿ ಆಮಿ ಜಾಕ್ಸನ್, ರಜನಿಕಾಂತ್, ಅಕ್ಷಯ್ ಕುಮಾರ್ ಮೊದಲಾದವರು ಚಿತ್ರದ ಬಗ್ಗೆ ಮಾತನಾಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin