ಗ್ರಾಮ ಪಂಚಾಯಿತಿಗಳ ವಿದ್ಯುತ್ ಬಿಲ್ ಬಾಕಿ ಮನ್ನಾ ಇಲ್ಲ : ಡಿಕೆಶಿ

ಈ ಸುದ್ದಿಯನ್ನು ಶೇರ್ ಮಾಡಿ

DKShivakumar-Session

ಬೆಳಗಾವಿ, ನ.22- ರಾಜ್ಯದಲ್ಲಿ ಈ ಬಾರಿ ತೀವ್ರ ಬರಗಾಲ ಆವರಿಸಿದೆ. ಆದರೆ, ಗ್ರಾಮ ಪಂಚಾಯಿತಿಗಳ ವಿದ್ಯುತ್ ಬಿಲ್ ಬಾಕಿಯನ್ನು ಮನ್ನಾ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಬರಗಾಲ ಆವರಿಸಿರುವ ಕಾರಣ ಗ್ರಾಮ ಪಂಚಾಯಿತಿಗಳಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿದಿ ರುವ ಬಿಲ್‍ನ ಹಣವನ್ನು ಮನ್ನಾ ಮಾಡುವ ಆಲೋಚನೆ ಸರ್ಕಾರದ ಮುಂದಿಲ್ಲ ಎಂದು ಪುನರುಚ್ಚರಿಸಿದರು.

ಸುಮಾರು 3767 ಕೋಟಿ ಬಾಕಿ ಇದೆ. ಈ ವರ್ಷ ವಿದ್ಯುತ್ ಖರೀದಿ ಮಾಡಿ ನಾವು ಪೂರೈಕೆ ಮಾಡುತ್ತಿದ್ದೇವೆ. ವಿದ್ಯುತ್ ಖರೀದಿಸಿದ 16 ದಿನದೊಳಗೆ ಹಣ ನೀಡದಿದ್ದರೆ ಇಂತಿಷ್ಟು ಬಡ್ಡಿಯನ್ನು ಹಾಕುತ್ತಾರೆ. ಈ ಹಣವನ್ನು ಕಟ್ಟುವವರು ಯಾರು ಎಂದು ಪ್ರಶ್ನಿಸಿದರು.  2006-07ನೆ ಸಾಲಿನಲ್ಲಿ ವಿದ್ಯುತ್ ಬಿಲ್‍ಗಳನ್ನು ನಿಗದಿತ ಅವಧಿಯೊಳಗೆ ಪಾವತಿ ಮಾಡಿದ ಗ್ರಾಮ ಪಂಚಾಯಿತಿಗಳಿಗೆ ಶೇ.25ರಷ್ಟು ಪವರ್ ಸಬ್ಸಿಡಿ ಸಹಾಯಧನ ಬಿಡುಗಡೆ ಮಾಡಲಾಗಿದೆ. ಇಲಾಖೆಯನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ನಿರಂತರವಾಗಿ ಮುಂದುವರಿಯಲಿದೆ ಎಂದು ಸಚಿವರು ತಿಳಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin