ಪರೀಕ್ಷಾ ಶುಲ್ಕ ಪಾವತಿಸಲು ಬ್ಯಾಂಕ್ ನಲ್ಲಿ ಹಣ ಸಿಗದೆ ವಿದ್ಯಾರ್ಥಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Student-Suicide

ಬಾಂದಾ,ನ.23-ಪರೀಕ್ಷೆ ಶುಲ್ಕ ಪಾವತಿಗೆ ಬ್ಯಾಂಕ್‍ನಿಂದ ಹಣ ಪಡೆಯಲು ವಿಫಲನಾದ 18 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಇಲ್ಲಿನ ಮಾವೈ ಬುಜರ್ಗ್ ಗ್ರಾಮದಲ್ಲಿ ನಡೆದಿದೆ. ಪರೀಕ್ಷೆಗಾಗಿ ಪಾವತಿಸಬೇಕಾದ ಹಣ ಪಡೆಯಲು ಕಳೆದ ಕೆಲವು ದಿನಗಳಿಂದ ಸರತಿ ಸಾಲಿನಲ್ಲಿ ನಿಂತಿದ್ದರೂ 2ನೇ ವರ್ಷದ ಬಿಎಸ್ಸಿ ವಿದ್ಯಾರ್ಥಿ ಸುರೇಶ್ ಎಂಬಾತನಿಗೆ ಬ್ಯಾಂಕ್‍ನಿಂದ ಡ್ರಾ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಹೇಳಲಾಗಿದೆ.  ನಿನ್ನೆಯೂ ಬ್ಯಾಂಕ್‍ನಿಂದ ಬರಿಗೈಯಲ್ಲಿ ಹತಾಶನಾಗಿ ಹಿಂದಿರುಗಿದ್ದ ಸುರೇಶ್ ತನ್ನ ತಾಯಿಯ ಸೀರೆಯಿಂದ ಛಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಚನೇಹಿ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಎಂದು ಸ್ಥಳೀಯರು ಹೇಳಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ತನಿಖೆ ಮುಂದುವರೆದಿದೆ.

<  ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… : ಪರಿಚಯಿಸುತ್ತಿದ್ದೇವೆ Eesanje News 24/7 ನ್ಯೂಸ್ ಆ್ಯಪ್ –  Click Here to Download >

Facebook Comments

Sri Raghav

Admin