ರಾಜ್ಯದಲ್ಲಿ ಹುಲಿಗಳ ಸಂತತಿ ಹೆಚ್ಚಳ

ಈ ಸುದ್ದಿಯನ್ನು ಶೇರ್ ಮಾಡಿ

Tigers

ಬೆಳಗಾವಿ (ಸುವರ್ಣಸೌಧ), ನ.23-ದೇಶದಲ್ಲೇ ಅತಿ ಹೆಚ್ಚು ಹುಲಿಗಳಿರುವ ರಾಜ್ಯ ಕರ್ನಾಟಕ ಎಂಬ ಕೀರ್ತಿಗೆ ರಾಜ್ಯ ಪಾತ್ರವಾಗಿದೆ. ವಿಧಾನಪರಿಷತ್ತಿನಲ್ಲಿ ಈ ವಿಷಯವನ್ನು ಅರಣ್ಯ ಸಚಿವ ರಮಾನಾಥ ರೈ ತಿಳಿಸಿದರು. ಕರ್ನಾಟಕದಲ್ಲಿ 2014ರಲ್ಲಿ ನಡೆದ ಗಣತಿಯ ಪ್ರಕಾರ 406 ಹುಲಿಗಳಿವೆ. 2006ರಲ್ಲಿ 290, 2010ರಲ್ಲಿ 300 ಹುಲಿಗಳಿದ್ದವು. ರಾಜ್ಯ ಸರ್ಕಾರ ಕೇಂದ್ರದ ಮಾರ್ಗಸೂಚಿ ಯಂತೆ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಹುಲಿಗಳ ಸಂತತಿ ಹೆಚ್ಚಾಗಿದೆ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯದ ವಿವಿಧ ಅಂಗಸಂಸ್ಥೆಗಳೊಂದಿಗೆ ಸಮನ್ವಯತೆ ಸಾಧಿಸಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಹುಲಿ ಯೋಜನೆ ಅನುಷ್ಠಾನಕ್ಕೆ ಪ್ರತಿವರ್ಷ ಆರ್ಥಿಕ ನೆರವು, ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಜೀವ ವೈವಿಧ್ಯತೆ ಹೆಚ್ಚಿಸುವುದು, ವಿವಿಧ ಪರಿಸರಾಭಿವೃದ್ಧಿ ಕಾರ್ಯಗಳು, ವೈಜ್ಞಾನಿಕ ಸಂಶೋಧನೆ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದರಿಂದ ಹುಲಿಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ತಿಳಿಸಿದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin