ಚಿರತೆ ಬೇಟೆಗಾಗಿ ಕಾದು ಕುಳಿತ ಅರಣ್ಯ ಇಲಾಖೆ

ಈ ಸುದ್ದಿಯನ್ನು ಶೇರ್ ಮಾಡಿ

kolara

ಕೋಲಾರ,ನ.25- ತಾಲ್ಲೂಕಿನಲ್ಲಿ ಚಿರತೆ ಹಾವಳಿ ಹೆಚ್ಚಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯವರು ಅಯ್ಯೂರು ಗ್ರಾಮದ ಬೆಟ್ಟದ ತಪ್ಪಲಿನಲ್ಲಿ ಚಿರತೆ ಸೆರೆಗಾಗಿ ಬೋನು ಇಟ್ಟು ಕಾದು ಕುಳಿತ್ತಿದ್ದಾರೆ. ಗ್ರಾಮದ ಸುತ್ತಮುತ್ತ ಚಿರತೆ ಓಡಾಡುತ್ತಿದ್ದು ಇದರಿಂದ ಭಯಭೀತರಾದ ಗ್ರಾಮಸ್ಥರು ಹೊಲ-ಗದ್ದೆಗಳಿಗೆ ಹೋಗಲು ಹಿಂಜರಿಯುತ್ತಿದ್ದಾರೆ. ಇದರ ಜತೆಗೆ ಜಾನುವಾರುಗಳನ್ನು ಸಹ ಮನೆಯಿಂದ ಹೊರ ಬಿಡಲು ಹೆದರುತ್ತಿದ್ದಾರೆ.

ಚಿರತೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿ ಮೇರೆಗೆ ಸಿಬ್ಬಂದಿಗಳು ಚಿರತೆ ಸೆರೆಗಾಗಿ ಬೋನು ಇಟ್ಟು ಕಾದು ಕುಳಿತ್ತಿದ್ದಾರೆ.ಆದರೆ ಇಲ್ಲಿಯವರೆಗೂ ಚಿರತೆ ಸೆರೆ ಸಿಕ್ಕಿಲ್ಲ. ಏನಾದರೂ ಮಾಡಿ ಚಿರತೆಯನ್ನು ಸೆರೆ ಹಿಡಿಯುತ್ತೇವೆ ಎಂದು ಅರಣ್ಯ ಇಲಾಖೆ ಸಿಬ್ಬಂದಿಗಳು ಹೇಳುತ್ತಿದ್ದಾರೆ.

 

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin