ಪೊಲೀಸರ ಭತ್ಯೆ ಹೆಚ್ಚಿಸಿದ್ದೇವೆ, ಮುಂದಿನ ವರ್ಷ ವೇತನ ಪರಿಷ್ಕರಣೆಗೆ ಕ್ರಮ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiha-Session

ಬೆಳಗಾವಿ, ನ.25- ಕೆಳಹಂತದ ಪೊಲೀಸ್ ಸಿಬ್ಬಂದಿಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಅನುಕಂಪ ಇದ್ದು, ಈಗಾಗಲೇ ಅವರ ಭತ್ಯೆಯನ್ನು ಹೆಚ್ಚಿಸಲಾಗಿದೆ. ಮುಂದಿನ ವರ್ಷ ವೇತನ ಪರಿಷ್ಕರಣೆ ಸಮಿತಿ ರಚಿಸಿ ವೇತನವನ್ನೂ ಪರಿಷ್ಕರಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ವಿಧಾನಸಭೆ ಶೂನ್ಯವೇಳೆಯಲ್ಲಿ ಶಾಸಕ ಪಿ.ರಾಜೀವ್ ಅವರು ಪೊಲೀಸರ ವೇತನವನ್ನು ಶೇ.30ರಷ್ಟು ಹೆಚ್ಚಿಸಬೇಕೆಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಪೊಲೀಸರ ವೇತನ ಮತ್ತು ಸೌಲಭ್ಯಗಳ ಪರಿಷ್ಕರಣೆಗೆ ಔರಾದ್ಕರ್ ಸಮಿತಿ ರಚಿಸಲಾಗಿತ್ತು. ಸಮಿತಿ ವರದಿ ನೀಡಿದ್ದು, ವೇತನ ಪರಿಷ್ಕರಿಸುವಂತೆ ಸಲಹೆ ನೀಡಿದೆ.

ಆದರೆ, ಕೇವಲ ಒಂದು ಇಲಾಖೆಯ ವೇತನ ಪರಿಷ್ಕರಿಸಲು ಸಾಧ್ಯವಾಗುವುದಿಲ್ಲ. ಮುಂದಿನ ವರ್ಷ ವೇತನ ಸಮಿತಿಯನ್ನು ರಚಿಸಲಾಗುವುದು. ಆ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳ ವೇತನ ಪರಿಷ್ಕರಣೆ ಅಧ್ಯಯನ ಮಾಡುವಂತೆ ಸೂಚಿಸುವುದಾಗಿ ಹೇಳಿದರು. ಸದ್ಯಕ್ಕೆ ಮಾಸಿಕ 2000ರೂ. ಹೆಚ್ಚುವರಿ ಹಣ ಸಿಗುವಂತೆ ಭತ್ಯೆಗಳನ್ನು ಪರಿಷ್ಕರಿಸಲಾಗಿದೆ. ಕಾನ್‍ಸ್ಟೆಬಲ್‍ನಿಂದ ಸಬ್‍ಇನ್ಸ್‍ಪೆಕ್ಟರ್ ವರೆಗೆ ಶೇ.90ರಷ್ಟು ಸಿಬ್ಬಂದಿಗಳಿಗೆ ಇದರ ಲಾಭವಾಗಲಿದೆ ಎಂದು ಅವರು ಹೇಳಿದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin