ಮುಕ್ತ ಮಾರುಕಟ್ಟೆಯಲ್ಲಿ ಸೀಮೆಎಣ್ಣೆ ಪೂರೈಕೆ : ಖಾದರ್

ಈ ಸುದ್ದಿಯನ್ನು ಶೇರ್ ಮಾಡಿ

UT-Khadar

ಬೆಳಗಾವಿ, ನ.25- ಮುಕ್ತ ಮಾರುಕಟ್ಟೆಯಲ್ಲಿ ಸೀಮೆಎಣ್ಣೆ ಪೂರೈಸಲು ಕ್ರಮ ಕೈಗೊಳ್ಳುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಭರವಸೆ ನೀಡಿದರು. ವಿಧಾನಸಭೆ ಶೂನ್ಯವೇಳೆಯಲ್ಲಿ ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ವಿಷಯ ಪ್ರಸ್ತಾಪಿಸಿ ಗ್ಯಾಸ್ ಸಿಲೆಂಡರ್ ನೀಡುತ್ತಿರುವುದರಿಂದ ಸೀಮೆ ಎಣ್ಣೆಯನ್ನು ಕಡಿತ ಮಾಡಲಾಗುತ್ತಿದೆ. ಇದರಿಂದ ಕರಾವಳಿ ಮತ್ತು ಮಲೆನಾಡಿನ ಜನರಿಗೆ ತುಂಬ ಸಮಸ್ಯೆಯಾಗಿದೆ. ಕನಿಷ್ಠ ಮುಕ್ತ ಮಾರುಕಟ್ಟೆಯಲ್ಲಾದರೂ ಸೀಮೆಎಣ್ಣೆ ಸಿಗುವಂತೆ ಮಾಡಿ. ವಿದ್ಯುತ್ ಸಂಪರ್ಕ ಇಲ್ಲದ ಜನ ಸೀಮೆಎಣ್ಣೆ ಖರೀದಿಸಿ ದೀಪ ಹಚ್ಚಿಕೊಳ್ಳುತ್ತಾರೆ. ಕರ್ನಾಟಕದ ಈ ಪ್ರದೇಶಗಳಿಗೆ ಸೀಮೆಎಣ್ಣೆ ಪೂರೈಸಲು ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಸಚಿವ ಖಾದರ್, ಕೇಂದ್ರ ಸರ್ಕಾರ ಸೀಮೆಎಣ್ಣೆ ಕೋಟಾದಲ್ಲಿ ಕಡಿತ ಮಾಡಿದೆ. ಜತೆಗೆ ಬೆಲೆಯಲ್ಲಿ ಹೆಚ್ಚಳ ಮಾಡಿದೆ. 10 ಲೀಟರ್ ಸೀಮೆಎಣ್ಣೆ ಖರೀದಿಸುವ ಬದಲಿಗೆ ಒಂದು ಗ್ಯಾಸ್ ಸಿಲೆಂಡರನ್ನೇ ಖರೀದಿಸಬಹುದು. ಇದರಿಂದ ಜನರಿಗೆ ತೊಂದರೆಯಾಗಿದೆ. ಕೇಂದ್ರ ಸರ್ಕಾರಕ್ಕೆ ಸೂಕ್ತ ಮನವಿ ಮತ್ತು ಪ್ರಸ್ತಾವನೆಯನ್ನು ಸಲ್ಲಿಸುತ್ತೇವೆ. ಮುಕ್ತ ಮಾರುಕಟ್ಟೆಯಲ್ಲಿ ಸೀಮೆಎಣ್ಣೆ ದೊರೆಯುವಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin