ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಖಂಡಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

protest

ಬಾಗೇಪಲ್ಲಿ, ನ.25- ಗಡಿ ತಾಲ್ಲೂಕಿನಲ್ಲಿ ಇತ್ತೀಚೆಗೆ ನಿರಂತರವಾಗಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ರಾಜಾರೋಷವಾಗಿ ನಡೆಯುತ್ತಿದ್ದರೂ ತಡೆಗಟ್ಟುವಲ್ಲಿ ತಾಲ್ಲೂಕು ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‍ಎಫ್‍ಐ) ತಾಲ್ಲೂಕು ಸಮಿತಿ ಸಂಚಾಲಕ ಎ.ಸೋಮಶೇಖರ ಆಕ್ರೋಶ ವ್ಯಕ್ತಪಡಿಸಿದರು.ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಆತ್ಯಾಚಾರ ಪ್ರಕರಣಗಳನ್ನು ಪೊಲೀಸ್ ಇಲಾಖೆ ಹಾಗೂ ತಾಲ್ಲೂಕು ಆಡಳಿತ ತಡೆಗಟ್ಟಬೇಕು ಎಂದು ಆಗ್ರಹಿಸಿಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ,ಅತ್ಯಾಚಾರ ಪ್ರಕರಣಗಳು ನಡೆಯುತ್ತಿದ್ದರೂ ಪೊಲೀಸ್ ಇಲಾಖೆ, ತಾಲ್ಲೂಕು ಆಡಳಿತ ಸೇರಿದಂತೆ ಎಲ್ಲಾ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧಿಕಾರಿಗಳು ತಮಗೇನೂ ಗೊತ್ತಿಲ್ಲದಂತೆ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಆತ್ಯಾಚಾರ ನಡೆಸುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ಶೂಲದಯ್ಯ ಆಗಮಿಸಿ, ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಂದ ಮನವಿ ಪತ್ರ ಸ್ವೀಕರಿಸಿ ಮಾತನಾಡಿ, ಈ ಕೂಡಲೇ ಹೆಣ್ಣು ಮಕ್ಕಳ ಸುರಕ್ಷತೆಗಾಗಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಬಳಿ ಚರ್ಚಿಸಿ ಮುನ್ನಚ್ಚರಿಕೆ ಕ್ರಮಗಳು ಪಾಲಿಸುವಂತೆ ಸೂಚಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ, ಪ್ರತಿಭಟನಾಕಾರರು ಪ್ರತಿಭಟನೆ ವಾಪಸ್ ಪಡೆದರು. ಪ್ರತಿಭಟನೆಯಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‍ಎಫ್‍ಐ) ತಾಲ್ಲೂಕು ಸಮಿತಿ ಸಹ-ಸಂಚಾಲಕ ವೈ.ಎನ್.ರಮೇಶ್, ಕೆ.ವಿ.ಅಶೋಕ, ಜಿ.ಎಂ.ಸಾಗರ್, ಬರ್ಕತ್, ಜಿ.ಆರ್.ಅಂಬರೀಶ್ ಸೇರಿದಂತೆ ಪಟ್ಟಣದ ವಿವಿಧ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಜರಿದ್ದರು.

 

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin