ಭಾರತ್ ಬಂದ್ ಹಿನ್ನೆಲೆಯಲ್ಲಿ ಶ್ರೀಕೃಷ್ಣ ದೇವರಾಯ ವಿವಿ ಪರೀಕ್ಷೆ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Srikrishna

ಬಳ್ಳಾರಿ, ನ.26– ನವೆಂಬರ್ 28ರ ಭಾರತ್ ಬಂದ್ ಹಿನ್ನೆಲೆಯಲ್ಲಿ ಅಂದು ನಡೆಯಬೇಕಿದ್ದ ವಿಜಯನಗರ ಶ್ರೀಕೃಷ್ಣ ದೇವರಾಯ ವಿವಿಯ ಎಲ್ಲ ಸ್ನಾತಕೋತ್ತರ ಪದವಿ ಮೂರನೆ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ನೋಟು ಬದಲಾವಣೆ ವಿರೋಧಿಸಿ ವಿಪಕ್ಷಗಳು ಭಾರತ್ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ವಿವಿ 28ರಂದು ನಡೆಯಲಿರುವ ಪರೀಕ್ಷೆಯನ್ನು ಮುಂದೂಡಿದ್ದು, ಅಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಡಿ.10ರಂದು ನಡೆಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin