ವಿಶ್ವನಾಥ್ ಬಾಯಿ ತೆರೆದರೆ ಗಬ್ಬುನಾರುತ್ತೆ : ಪ್ರತಾಪ್‍ಸಿಂಹ

ಈ ಸುದ್ದಿಯನ್ನು ಶೇರ್ ಮಾಡಿ

Vishwanath

ಮೈಸೂರು, ನ.26-ಮಾಜಿ ಸಚಿವ ಎಚ್.ವಿಶ್ವನಾಥ್ ಬಾಯಿ ತೆರೆದರೆ ಗಬ್ಬುನಾರುತ್ತೆ. ಅವರ ಬಾಯಲ್ಲಿ ಬರೀ ಕೆಟ್ಟ ಮಾತುಗಳು ಬರುತ್ತವೆ. ಅವರನ್ನ ಯಾರಾದರೂ ನಾಯಿಗೆ ಹೋಲಿಸಿದರೆ ಅದನ್ನು ಸ್ವಾಗತಿಸುತ್ತೇನೆ ಎಂದು ಸಂಸದ ಪ್ರತಾಪ್‍ಸಿಂಹ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕ ಮೌಲ್ಯದ ನೋಟುಗಳನ್ನು ರದ್ದು ಮಾಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಚ್.ವಿಶ್ವನಾಥ್ ನಾಯಿಗೆ ಹೋಲಿಸಿರುವುದು ಸರಿಯಲ್ಲ. ಇಂತಹ ಕೆಟ್ಟ ಪದಗಳನ್ನು ಮಾತನಾಡುವುದಕ್ಕೂ ಮುನ್ನ ಯೋಚಿಸಬೇಕು ಎಂದು ತಿರುಗೇಟು ನೀಡಿದರು.

ವಿಶ್ವನಾಥ್ ಬಳಿ ಕಪ್ಪು ಹಣವಿದೆಯೇ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಅವರ ಬಳಿ ಕಪ್ಪು ಹಣವಿದೆಯೋ, ಇಲ್ಲವೋ ನನಗೆ ಗೊತ್ತಿಲ್ಲ. ಕಪ್ಪು ಹಣ ಉಳ್ಳವರಿಗೆ ತೊಂದರೆಯಾಗುತ್ತದೆ. ಕಾಳಧನಿಕರು ಹಾಗೂ ಭ್ರಷ್ಟಾಚಾರವನ್ನು ತಡೆಗಟ್ಟುವ ನಿಟ್ಟಿನಲ್ಲಿ 500 ಮತ್ತು 1000 ಮುಖಬೆಲೆಯ ನೋಟುಗಳನ್ನು ರದ್ದು ಮಾಡಿದ್ದಾರೆ ಎಂದರು. ವಿಶ್ವನಾಥ್ ದೈಹಿಕವಾಗಿ ಆರೋಗ್ಯವಾಗಿರಲಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದ ನಂತರ ಮಾನಸಿಕವಾಗಿ ತೀವ್ರ ಅಸ್ವಸ್ಥರಾಗಿದ್ದಾರೆ. ಹೀಗಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin