ಎನ್.ಆರ್.ರಮೇಶ್‍ಗೆ ಲೋಕ ಪ್ರಕಾಶಕ ಪ್ರಶಸ್ತಿ

ಈ ಸುದ್ದಿಯನ್ನು ಶೇರ್ ಮಾಡಿ

Ramesh-01

ಬೆಂಗಳೂರು, ನ.27- ಭ್ರಷ್ಟಾಚಾರದ ವಿರುದ್ಧ ಹಾಗೂ ಸಮಾಜಮುಖಿ ಹೋರಾಟಗಳಲ್ಲಿ ತೊಡಗಿಸಿಕೊಂಡಿರುವ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಮತ್ತು ಬಿಜೆಪಿ ಬೆಂಗಳೂರು ಘಟಕದ ವಕ್ತಾರ ಎನ್.ಆರ್.ರಮೇಶ್ ಅವರಿಗೆ ಸ್ಪಂದನ ಸೇವಾ ಸಂಸ್ಥೆ ಲೋಕಪ್ರಕಾಶಕ ಪ್ರಶಸ್ತಿ ನೀಡಿ ಗೌರವಿಸಿದೆ.
ಹುಕ್ಕಾ ಬಾರ್, ಒಎಫ್‍ಸಿ ಕೇಬಲ್ ವಿರುದ್ಧದ ಹೋರಾಟ ಮತ್ತು ಬಿಬಿಎಂಪಿಗೆ ಕೋಟ್ಯಂತರ ರೂ.ಗಳನ್ನು ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಎನ್.ಆರ್.ರಮೇಶ್ ಅವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

ಸ್ಪಂದನ ಸೇವಾ ಸಂಸ್ಥೆ ಅಧ್ಯಕ್ಷ ವೆಂಕಟೇಶ್ ಪೈ , ಉಪಾಧ್ಯಕ್ಷ ನರಸಿಂಹಮೂರ್ತಿ, ಪ್ರಧಾನ ಕಾರ್ಯದರ್ಶಿ ನಾರಾಯಣ ಮತ್ತಿತರರು ಎನ್.ಆರ್.ರಮೇಶ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin