ಬೈಕ್‍ಗಳ ಮುಖಾಮುಖಿ ಡಿಕ್ಕಿ ಇಬ್ಬರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

deadly--accident
ಕೋಲಾರ, ನ.28-ವೇಗವಾಗಿ ಬಂದ ಎರಡು ಬೈಕ್‍ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಇಬ್ಬರು ಮೃತಪಟ್ಟು ಒಬ್ಬ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಕಳೆದ ರಾತ್ರಿ ಬಂಗಾರಪೇಟೆ ತಾಲೂಕಿನ ಚಿಕ್ಕತೂಮಟಗಿರಿ ಬಳಿ ನಡೆದಿದೆ.ಮೃತರು ಬೂದಿಕೋಟೆ ನಿವಾಸಿ ಸುರೇಶ್ (27) ಹಾಗೂ ದಿನ್ನಹಳ್ಳಿಯ ಮಂಜುನಾಥ್ (28) ಎಂದು ತಿಳಿದುಬಂದಿದೆ.ರಸ್ತೆ ತಿರುವಿನಲ್ಲಿ ವೇಗವಾಗಿ ಬೈಕ್ ಚಾಲನೆ ಮಾಡಿಕೊಂಡು ಬರುತ್ತಿದ್ದ ಇಬ್ಬರು ನಿಯಂತ್ರಣ ಕಳೆದುಕೊಂಡು ಡಿಕ್ಕಿ ಹೊಡೆದುಕೊಂಡಿದ್ದಾರೆ. ಇದರ ರಭಸಕ್ಕೆ ಬೈಕ್‍ಗಳು ಛಿದ್ರಗೊಂಡಿವೆ. ತಲೆ ಭಾಗಕ್ಕೆ ತೀವ್ರ ಪೆಟ್ಟು ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ.ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

 

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin