ಸಿಪಿಐಎಂ-ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಆಕ್ರೋಶ್ ದಿವಸ್

ಈ ಸುದ್ದಿಯನ್ನು ಶೇರ್ ಮಾಡಿ

money-robbery

ಮಳವಳ್ಳಿ, ನ.29-ವಿಪಕ್ಷಗಳು ಕರೆ ನೀಡಿರುವ ಆಕ್ರೋಶ್ ದಿವಸ್ ಅಂಗವಾಗಿ ಸಿಪಿಐ ಎಂ ಪಕ್ಷದ ಕಾರ್ಯಕರ್ತರು ಬೆಂಬಲಿಸಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಇಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಮುಂಭಾಗ ಸಮಾವೇಶಗೊಂಡ ಪಕ್ಷದ ಮುಖಂಡರಾದ ಭರತ್‍ರಾಜ್ ಮತ್ತಿತರರು, ಕಪ್ಪುಹಣದ ವಿರುದ್ದದ ಹೋರಾಟ ಎಂಬುದು ಮೋದಿ ಅವರ ಡೋಂಗಿತನವಾಗಿದ್ದು ನೋಟು ರದ್ದಿನಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ ಎಂದು ದೂರಿದರು. ಲಿಂಗರಾಜಮೂರ್ತಿ, ಬಸವರಾಜು, ತಿಮ್ಮೇಗೌಡ, ಸುನೀತ, ಸುಶೀಲ, ಆನಂದ್, ಗುರುಸ್ವಾಮಿ ಮುಂತಾದವರು ಪಾಲ್ಗೊಂಡಿದ್ದರು.

ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರತಿಭಟನೆ:

ವಿಪಕ್ಷಗಳು ಕರೆ ನೀಡಿದ್ದ ಆಕ್ರೋಶ್ ದಿವಸ್ ಅಂಗವಾಗಿ ಬ್ಲಾಕ್ ಕಾಂಗ್ರೆಸ್ ಸಮಿತಿಯು ಪ್ರತಿಭಟನಾ ಮೆರವಣಿಗೆ ನಡೆಸಿತು. ಸಮಿತಿ ಕಚೇರಿ ಆವರಣದಿಂದ ಮೆರವಣಿಗೆ ಹೊರಟ ಮುಖಂಡರು ಹಾಗೂ ಕಾರ್ಯಕರ್ತರು ಇಲ್ಲಿನ ಪೇಟೆ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರಲ್ಲದೆ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಕೆ ಜೆ ದೇವರಾಜು, ಪುಟ್ಟರಾಮು, ತಾ ಪಂ ಅಧ್ಯಕ್ಷ ಆರ್.ಎನ್.ವಿಶ್ವಾಸ್, ಮುಖಂಡರಾದ ಸುರೇಶ್ ಮಾತನಾಡಿ, ನೋಟುಗಳ ರದ್ದಿನ ಬಗ್ಗೆ ತಮ್ಮ ಯಾವುದೇ ತಕರಾರು ಇಲ್ಲ ಎಂದ ಅವರು ಆದರೆ ಬದಲಿ ಚಿಲ್ಲರೆ ನೋಟುಗಳನ್ನು ಮುಂಚಿತವಾಗಿ ಸಾಕಷ್ಟು ಪ್ರಮಾಣದಲ್ಲಿ ಒದಗಿಸದೆ ಏಕಾಏಕಿ ದುಬಾರೆ ಮೌಲ್ಯದ ನೋಟುಗಳನ್ನು ರದ್ದು ಮಾಡುವ ಮೂಲಕ ಜನ ಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದ್ದಾರೆ ಎಂದು ದೂರಿದರು.ತಾ ಪಂ ಉಪಾಧ್ಯಕ್ಷ ಸಿ ಮಾದು, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರಾದ ದೊಡ್ಡಯ್ಯ, ಸದಸ್ಯರಾದ ಪುಟ್ಟಸ್ವಾಮಿ, ಜಿ ಪಂ ಸದಸ್ಯರಾದ ಚಂದ್ರಕುಮಾರ್, ಪುರಸಭಾಧ್ಯಕ್ಷ ರಿಯಾಜಿನ್, ಸದಸ್ಯರಾದ ಶಿವಕುಮಾರ್, ಕಿರಣ್‍ಶಂಕರ್, ಕೃಷ್ಣ, ಎಂ ನಾಗೇಶ್, ಉಮೇಶ್, ಅಖಿಲ್, ಮಂಜುನಾಥ್ ಮತ್ತಿತರರು ಪಾಲ್ಗೊಂಡಿದ್ದರು.

 

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download

Facebook Comments

Sri Raghav

Admin