ಚೀತಾ ಹೆಲಿಕಾಪ್ಟರ್ ಪತನ : ಮೂವರು ಸೇನಾಧಿಕಾರಿಗಳ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

Cheetah

ಸುಕ್ನ (ಪಶ್ಚಿಮ ಬಂಗಾಳ), ನ.30- ಚೀತಾ ಹೆಲಿಕಾಪ್ಟರ್ ಪತನಗೊಂಡು ಮೂವರು ಸೇನಾಧಿಕಾರಿಗಳು ದುರಂತ ಸಾವಿಗೀಡಾದ ಘಟನೆ ಇಂದು ಬೆಳಗ್ಗೆ ಪಶ್ಚಿಮ ಬಂಗಾಳದ ಸುಕ್ನ ಜಿಲ್ಲೆಯಲ್ಲಿ ನಡೆದಿದೆ.  ಸೇನಾ ಹೆಲಿಕಾಪ್ಟರ್ ಪತನದಲ್ಲಿ ಮೂವರು ಸೇನಾಧಿಕಾರಿಗಳು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಅಧಿಕಾರಿಗಳು ಭಾರತೀಯ ವಾಯು ಪಡೆಗೆ ಸೇರಿದ್ದವರು. ಕಾರ್ಯಾಚರಣೆಯೊಂದರಲ್ಲಿ ಪಾಲ್ಗೊಳ್ಳಲು ತೆರಳುವ ವೇಳೆ ಈ ಘಟನೆ ನಡೆದಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಈ ಘಟನೆ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ. ಘಟನೆಯಲ್ಲಿ ಗಾಯಗೊಂಡಿರುವ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

 

 

Facebook Comments

Sri Raghav

Admin