ಕನ್ಯಾಕುಮಾರಿಯಿಂದ ಕಾಶ್ಮೀರವರೆಗಿನ ಸೈಕಲ್ ಜಾಥಾಗೆ ಬೀಳ್ಕೊಡುಗೆ

ಈ ಸುದ್ದಿಯನ್ನು ಶೇರ್ ಮಾಡಿ

BBMP-01

ಬೆಂಗಳೂರು, ಡಿ.1- ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಪುನರ್ ಬಳಕೆಯಾಗುವ ವಸ್ತುಗಳನ್ನು ಉತ್ಪಾದಿಸಲು ಪರಿಣಾಮಕಾರಿ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಮೇಯರ್ ಜಿ.ಪದ್ಮಾವತಿ ಇಂದಿಲ್ಲಿ ತಿಳಿಸಿದರು. ರೋಟರಿ ಕ್ಲಬ್ ಆಫ್ ಮದ್ರಾಸ್ ಹಾಗೂ ಸ್ವಚ್ಛಭಾರತ್ ಮಿಷನ್ ಸಹಯೋಗದೊಂದಿಗೆ ಸ್ವಚ್ಛ ಭಾರತ ನಿರ್ಮಾಣದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕನ್ಯಾಕುಮಾರಿಯಿಂದ ಕಾಶ್ಮೀರ ವರೆಗೆ ಹಮ್ಮಿಕೊಂಡಿರುವ ಸೈಕಲ್ ಜಾಥಾವನ್ನು ಬೀಳ್ಕೊಟ್ಟ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಚನ್ನೈನಿಂದ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ದೇಶದ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಆರಂಭಿಸಿರುವ ಸೈಕಲ್ ಜಾಥಾ ನಗರ ಪ್ರವೇಶಿಸಿ ವಿಶ್ರಾಂತಿ ಪಡೆದು ಇಂದು ತಮ್ಮ ಪಯಣವನ್ನು ಮುಂದುವರೆಸಿತು. ಇಂತಹ ತಂಡವನ್ನು ಬೀಳ್ಕೊಟ್ಟ ನಂತರ ಮಾತನಾಡಿದ ಮೇಯರ್ ಅವರು, ಬಿಬಿಎಂಪಿ ಯಲ್ಲಿ ಸ್ವಚ್ಛ ಭಾರತ ಯೋಜನೆಯನ್ನು ಅನುಷ್ಠಾನಗೊಳಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಬೀದಿ ಗುಡಿಸುವುದು, ಕಮ್ಯೂನಿಟಿ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವ ಹಣೆ, ನಗರದಲ್ಲಿ ಉತ್ಪತ್ತಿಯಾಗುವ 4ಸಾವಿರ ಟನ್ ಘನ ತ್ಯಾಜ್ಯವನ್ನು ಸಂಷ್ಕರಿಸಲು ಕಸ ಸಂಸ್ಕರಣಾ ಘಟಕಗಳ ಸ್ಥಾಪನೆ ಹಾಗೂ ಪ್ಲ್ಯಾಸ್ಟಿಕ್ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿ ಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ದೇಶದ ಸ್ವಚ್ಛತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಸೈಕಲ್ ಜಾಥಾ ಯಶಸ್ವಿಯಾಗಿ ಎಂದು ಅವರು ಇದೇ ಸಂದರ್ಭದಲ್ಲಿ ಹಾರೈಸಿದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin