ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಆಸ್ಪತ್ರೆಗೆ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

Karunanidhi

ಚೆನ್ನೈ, ಡಿ.1-ಅನಾರೋಗ್ಯದಿಂದ ಬಳಲುತ್ತಿರುವ ಡಿಎಂಕೆ ಪರಮೋಚ್ಚ ನಾಯಕ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಡಾ.ಎಂ.ಕರುಣಾನಿಧಿ ಅವರನ್ನು ಇಂದು ಮುಂಜÁನೆ ಇಲ್ಲಿನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.   ಅಲರ್ಜಿ, ಪೋಷಕಾಂಶ ಕೊರತೆ ಮತ್ತು ನಿರ್ಜಲೀಕರಣ ಸಮಸ್ಯೆಯಿಂದ ಬಳಲುತ್ತಿರುವ 93 ವರ್ಷ ವಯಸ್ಸಿನ ಕರುಣಾನಿಧಿ ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಕಾವೇರಿ ಹಾಸ್ಪಿಟಲ್‍ನ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಅರವಿಂದನ್ ಸೆಲ್ವರಾಜ್ ಹೇಳಿದ್ದಾರೆ.  ಕೆಲವು ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಬಗ್ಗೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಅಲರ್ಜಿ ಸಮಸ್ಯೆಯಿಂದ ಬಳಲುತ್ತಿರುವ ಕರುಣಾನಿಧಿ ಅವರು ಯಾವುದೇ ಸಾರ್ವಜನಿಕ ಸಭೆ-ಸಮಾರಂಭಗಳಿಂದ ದೂರು ಉಳಿದಿದ್ದಾರೆ. ಇದೇ ಕಾರಣಕ್ಕಾಗಿ ಕಳೆದ ತಮಿಳುನಾಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಪ್ರಚಾರದಲ್ಲೂ ಪಾಲ್ಗೊಂಡಿರಲಿಲ್ಲ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin